ಮಡಿಕೇರಿ, ಮೇ 25: ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಎ.ಕೆ.ಹ್ಯಾರಿಸ್ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಆದೇಶದ ಮೇರೆಗೆ ಹ್ಯಾರಿಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ವೈ. ಸೈಯದ್ ಅಹಮ್ಮದ್ ತಿಳಿಸಿದ್ದಾರೆ.