ಮಡಿಕೇರಿ, ಮೇ 26: ಮಡಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟ ಮತ್ತು ಮೈಸೂರಿನ ನೇತ್ರಧಾಮ ಸೂಪರ್ ಸ್ಪೆಷಾಲಿಟಿ ಐ ಆಸ್ವತ್ರೆಯ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲೆ ಕಲ್ಮಾಡಂಡ ಸರಸ್ವತಿ ಸುಬ್ಬಯ್ಯ, ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರಬೇಕು. ಉಚಿತ ಆರೋಗ್ಯ ಶಿಬಿರಗಳನ್ನು ಸದುಪಯೋಗ ಪಡಿಸಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಂತೆ ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ, ಪೊಮ್ಮಕ್ಕಡ ಕೂಟದ ವತಿಯಿಂದ ಅನೇಕ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಕರೆಸ್ಪಾಂಡೆಂಟ್ ಚೋವಂಡ ಡಿ. ಕಾಳಪ್ಪ, ಮಡಿಕೇರಿ ಕೊಡವ ಸಮಾಜದ ಲೆಕ್ಕಪರಿಶೋಧಕ ಕೆ. ಉತ್ತಪ್ಪ, ಮೈಸೂರಿನ ನೇತ್ರಧಾಮ ಆಸ್ಪತ್ರೆಯ ಹೆಚ್.ಆರ್. ರಘು, ಡಾ. ಪ್ರಿಯಾಂಕ, ಡಾ. ರಾಕ್ಸಿ ಮತ್ತಿತರರು ಹಾಜರಿದ್ದರು.

ಕಾರ್ಯಕ್ರಮವನ್ನು ಅನಿತಾ ಪೂವಯ್ಯ ನಿರೂಪಿಸಿ, ಬೊಳ್ಳಜಿರ ಯಮುನಾ ಅಯ್ಯಪ್ಪ ಸ್ವಾಗತಿಸಿ, ಉಳ್ಳಿಯಡ ಗಂಗಮ್ಮ ಪ್ರಾರ್ಥಿಸಿದರು.