ನಾಪೆÇೀಕ್ಲು, ಮೇ 25: ಎಮ್ಮೆಮಾಡು ಗ್ರಾಮ ಪಂಚಾಯಿತಿಗೆ ಒಳಪಟ್ಟ ಪಡಿಯಾಣಿ, ದೋಣಿಕಡು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂಪರ್ಕ ಕಲ್ಪಿಸುವ ಕುಂಟಕಂಡಿ ರಸ್ತೆಯನ್ನು ಗ್ರಾಮ ಪಂಚಾಯಿತಿ ದುರಸ್ತಿಗೊಳಿಸದೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಬಗ್ಗೆ ಪಣಿಯಾಣಿ ಗ್ರಾಮದ ಉನೈಸ್ ಈ ರಸ್ತೆಯಲ್ಲಿ ಸುಮಾರು 30 ಕುಟುಂಬಗಳ ಮನೆಗಳಿವೆ. ಈ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಸಣ್ಣ ಮಳೆ ಸುರಿದರೂ, ರಸ್ತೆ ಕೆರೆಯಂತಾಗುತ್ತದೆ. ಮದರಸ ಮತ್ತು ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ನಡೆದಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಈ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಸದಸ್ಯರಿಗೆ ಮತ್ತು ಆಡಳಿತಕ್ಕೆ ಹಲವು ಬಾರಿ ದೂರು ನೀಡಿದರು ಪ್ರಯೋಜನವಾಗಿಲ್ಲ ಎಂದು ದೂರಿದ ಅವರು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.