ಮಡಿಕೇರಿ, ಮೇ 25: ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ದಲಿತ ಸಮುದಾಯದವರಿಗಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಜೈ ಭೀಮ್ ಕಪ್ ಕ್ರಿಕೆಟ್, ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾವಳಿ ನಡೆಯುತ್ತಿದೆ.
ಕ್ರೀಡಾಕೂಟದ ಸಭಾ ಕಾರ್ಯಕ್ರಮವನ್ನು ವಾಣಿಜ್ಯೋದ್ಯಮಿ ಗಳ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಎಂ. ಗಣೇಶ್ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಗ್ರೀನ್ಲ್ಯಾಂಡ್ ಹೊಟೇಲ್ ಮಾಲೀಕ ಶರೀನ್, ದÀಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ವೀರಭದ್ರಯ್ಯ ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಾಜರಾಜೇಶ್ವರಿ ಹೀರೋ ಶೋರೂಂ ಮಾಲೀಕ ಕಿರಣ್ಕುಮಾರ್ ಪಾಲ್ಗೊಂಡಿದ್ದರು.
ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ತಾಲೂಕು ಸಂಚಾಲಕ ದೀಪಕ್ ಉಪಸ್ಥಿತರಿದ್ದರು.