ಮಡಿಕೇರಿ, ಮೇ 26: ಪ್ರಸಕ್ತ 2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಉಚಿತ ಊಟ, ವಸತಿ ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವದು. ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಜೂನ್ 4 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಬಳಿಯಲ್ಲಿರುವ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08272-225628ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಅವಿನ್ ಅವರು ತಿಳಿಸಿದ್ದಾರೆ.