ಮಡಿಕೇರಿ, ಮೇ 26: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಪ್ರಥಮಾವೃತ್ತಿಯಲ್ಲಿ ಪ್ರಕಟವಾಗಿರುವ ಅನುದಾನಿತ ಪುಸ್ತಕಗಳನ್ನು ಹಾಗೂ ಅನುದಾನವನ್ನು ಕುರಿತ ಪುಸ್ತಕಗಳನ್ನು 2018ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಅರ್ಹ ಅನುವಾದಕರು, ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡದಿಂದ ಇತರ ಯಾವದೇ ಭಾಷೆಗಾಗಲೀ ಇಲ್ಲವೇ ಇತರ ಯಾವದೇ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡಿರುವ ಕೃತಿಗಳನ್ನು ಬಹುಮಾನಕ್ಕಾಗಿ ಪರಿಗಣಿಸಲಾಗುತ್ತದೆ. ಅನುದಾನಿತ ಪ್ರಕಟಣೆಗಳ ಒಂದು ಪ್ರತಿಯನ್ನು ರಿಜಿಸ್ಟ್ರಾರ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಜ್ಞಾನಭಾರತಿ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ದೂ :23183311/12ಸ ಕಚೇರಿಗೆ ಖುದ್ದಾಗಿ ಅಥವಾ ಅಂಚೆ-ಕೊರಿಯರ್ ಮೂಲಕ ತಾ. 30 ರೊಳಗೆ ತಲಪಿಸಬೇಕು.