ಮಡಿಕೇರಿ, ಮೇ 25: 2018ರ ಪ್ರಕೃತಿ ವಿಕೋಪದಲ್ಲಿ ಸಂಭವಿಸಿದ ಮನೆಹಾನಿ, ಬೆಳೆ ಹಾನಿ, ಜಮೀನು ನಷ್ಟ ಸಂಬಂಧಿಸಿದ ಪರಿಹಾರ ಪಡೆಯುವಲ್ಲಿ ಸಮಸ್ಯೆ ಇದ್ದಲ್ಲಿ ಬಗೆಹರಿಸುವ ಉದ್ದೇಶದಿಂದ ಜಿಲ್ಲಾಡಳಿತದಿಂದ ಪರಿಹಾರ ಅದಾಲತ್ತನ್ನು ಹಮ್ಮಿಕೊಳ್ಳಲಾಗಿದೆ. ತಾ. 27ರಿಂದ 29ರವರೆಗೆ ಜಿಲ್ಲಾಧಿಕಾರಿ ಕಚೇರಿಯ ಕೊಠಡಿ ಸಂಖ್ಯೆ 32ರಲ್ಲಿ ಬೆಳಿಗ್ಗೆ 10ರಿಂದ ಸಂಜೆ 5.30 ಗಂಟೆಯವರೆಗೆ ಅದಾಲತ್ ನಡೆಯಲಿದ್ದು, ಪರಿಹಾರ ಪಾವತಿ ಅರ್ಜಿಯೊಂದಿಗೆ ಸಲ್ಲಿಸಿದ್ದ ಬ್ಯಾಂಕ್ ಪಾಸ್‍ಪುಸ್ತಕ ಹಾಗೂ ಆಧಾರ್ ಕಾರ್ಡ್‍ನ ಜೆರಾಕ್ಸ್ ಪ್ರತಿಯೊಂದಿಗೆ ಪಾಲ್ಗೊಳ್ಳಬಹುದು.