ಮಡಿಕೇರಿ, ಮೇ 25 : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಹಾಗೂ ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಇತರೆ ಅಧಿಕಾರಿಗಳೊಂದಿಗೆ ಕೆ.ನಿಡುಗಣೆ ಪಂಚಾಯಿತಿ ವ್ಯಾಪ್ತಿಯ ಹೆಬ್ಬೆಟಗೇರಿ, ದೇವಸ್ತೂರು, ಕಾಲೂರು ಗ್ರಾಮಗಳಲ್ಲಿನ ಪ್ರಕೃತಿ ವಿಕೋಪ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.