ಸುಂಟಿಕೊಪ್ಪ, ಮೇ 29: ಕೊಡಗು ಜಿಲ್ಲಾ ಪಂಚಾಯಿತಿ, ಸೋಮವಾರಪೇಟೆ ತಾಲೂಕು, ಸುಂಟಿಕೊಪ್ಪ ಹೋಬಳಿಯ ಕೃಷಿ ಇಲಾಖೆಯ ವತಿಯಿಂದ ತಾ. 30ರಂದು (ಇಂದು) ಸಮೀಪದ ಏಳನೇ ಹೊಸಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಅಪ್ಪಚ್ಚು ರಂಜನ್, ವಸ್ತು ಪ್ರದರ್ಶನದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಕೃಷಿ ಮತ್ತು ಕೈಗಾರಿಕಾ ಸ್ಥಾನೀಯ ಸಮಿತಿಯ ಅಧ್ಯಕ್ಷೆ ಸರೋಜಮ್ಮ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಏಳನೇ ಹೊಸಕೋಟೆ ಗ್ರಾ.ಪಂ. ಅಧ್ಯಕ್ಷೆ ಎಂ.ಎಂ.ಸುಮಲತ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ.ಸದಸ್ಯರಾದ ಪಿ.ಎಂ.ಲತೀಫ್, ಕೆ.ಪಿ.ಚಂದ್ರಕಲಾ, ಕುಮುದಾ ಧರ್ಮಪ್ಪ, ಎಂ.ಬಿ. ಸುನಿತ, ಕೊಡಗು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ಮಹಾಂತೇಶಪ್ಪ, ತಾ.ಪಂ.ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ತಾ.ಪಂ. ಸದಸ್ಯರಾದ ವಿಜು ಚಂಗಪ್ಪ, ಬಲ್ಲಾರಂಡ ಮಣಿ ಉತ್ತಪ್ಪ, ಓಡಿಯಪ್ಪನ ವಿಮಲಾವತಿ, ಏಳನೇ ಹೊಸಕೋಟೆ ಗ್ರಾ.ಪಂ. ಉಪಾಧ್ಯಕ್ಷ ಮುಸ್ತಾಫ, ಸೋಮವಾರಪೇಟೆ ತಾ. ಕೃಷಿ ಸಮಾಜದ ಅಧ್ಯಕ್ಷ ಎಸ್.ಪಿ ಪೊನ್ನಪ್ಪ, ಸೋಮವಾರಪೇಟೆ ಪುಷ್ಪಗಿರಿ ರೈತ ಉತ್ಪಾದಕರ ಸಂಘದ ಅಧ್ಯಕ್ಷ ಎಂ.ಎಸ್.ದೇವಯ್ಯ ಭಾಗವಹಿಸಲಿದ್ದಾರೆ.
ನಂತರ ವಿಜ್ಞಾನಿಗಳೊಂದಿಗೆ ರೈತ ಸಂವಾದ ಕಾರ್ಯಕ್ರಮ ನಡೆಯಲಿದ್ದು ನುರಿತ ವಿಜ್ಞಾನಿಗಳು ಭಾಗವಹಿಸಲಿದ್ದಾರೆ ಎಂದು ಸುಂಟಿಕೊಪ್ಪ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಪಿ.ಎಸ್. ಬೋಪಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.