ಸುಂಟಿಕೊಪ್ಪ, ಮೇ 28: ಶ್ರೀ ರಾಮ ಮತ್ತು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಂಗಮಂದಿರ ವನ್ನು ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ ತಾ. 29 ರಂದು (ಇಂದು) ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶಶಿಕಾಂತ ರೈ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಡಗು-ಮೈಸೂರು ಲೋಕಸಭಾ ಸಂಸದ ಪ್ರತಾಪ್ ಸಿಂಹ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಹಾಸನ ಜಿಲ್ಲಾ ಗ್ರಾಹಕರ ವೇದಿಕೆ ಅಧ್ಯಕ್ಷ ಎ. ಲೋಕೇಶ್ ಕುಮಾರ್, ತಾ.ಪಂ. ಸದಸ್ಯ ವಿಜು ಚಂಗಪ್ಪ, ಪ್ರಜಾಸತ್ಯ ದಿನಪತ್ರಿಕೆಯ ಸಂಪಾದಕ ಡಾ. ಬಿ.ಸಿ. ನವೀನ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ದೇವಾಲಯದ ಚತುರ್ಥ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವವು ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ, ವೇದಮೂರ್ತಿ, ಬಿ. ರಾಮಕೃಷ್ಣ ಕಲ್ಲೂರಾಯ ಹಾಗೂ ಕ್ಷೇತ್ರದ ಅರ್ಚಕರಾದ ಪ್ರಭಾಕರ ಕುದ್ದಣ್ಣಾಂiÀiರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.