ಮಡಿಕೇರಿ, ಮೇ 29: ಪೊನ್ನಂಪೇಟೆಯ ನೂತನ ನ್ಯಾಯಾಲಯ ಸಂಕೀರ್ಣದಲ್ಲಿ ವಾರದಲ್ಲಿ ಎರಡು ದಿನ ಕಾರ್ಯನಿರ್ವಹಿಸುವಂತೆ ವ್ಯವಸ್ಥೆ ಮಾಡಲಾಗಿರುವ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯ (.........) ದ ಉದ್ಘಾಟನೆ ಹಾಗೂ ವನಮಹೋತ್ಸವ ಕಾರ್ಯಕ್ರಮ ಜೂನ್ 1 ರಂದು ನಡೆಯಲಿದೆ.

ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖೆ ಹಾಗೂ ಪೊನ್ನಂಪೇಟೆ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಿಗದಿಯಾಗಿದ್ದು, ಪೊನ್ನಂಪೇಟೆ ನ್ಯಾಯಾಲಯ ಆವರಣದಲ್ಲಿ ಜೂನ್ 1 ರಂದು ಬೆ. 10.35 ರಿಂದ ಜರುಗಲಿದೆ. ವನಮಹೋತ್ಸವ ಕಾರ್ಯಕ್ರಮ ಹಾಗೂ ಹಿರಿಯಶ್ರೇಣಿ ನ್ಯಾಯಾಲಯದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ನೆರವೇರಿಸಲಿದ್ದಾರೆ.

ಪೊನ್ನಂಪೇಟೆ ವಕೀಲರ ಸಂಘದ ಅಧ್ಯಕ್ಷ ಎಸ್.ಡಿ. ಕಾವೇರಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಪೊನ್ನಂಪೇಟೆಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ.ಆರ್. ಜಯಪ್ರಕಾಶ್ ಬೆಂಗಳೂರಿನ ಉಚ್ಚನ್ಯಾಯಾಲಯದ ವಕೀಲ ಮಾಚಿಮಂಡ ಸುರೇಶ್ ಅಯ್ಯಪ್ಪ, ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷೆ ಮೂಕಳೇರ ಸುಮಿತಾ ಗಣೇಶ್ ಅವರು ಪಾಲ್ಗೊಳ್ಳಲಿದ್ದಾರೆ.