ಮಡಿಕೇರಿ, ಮೇ 29 : ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮಾನವ ಜೀವಹಾನಿ, ಜಾನುವಾರು ಹಾನಿ, ಬೆಳೆ ಹಾನಿ, ಮನೆ ಹಾನಿ ಹಾಗೂ ವಿವಿಧ ಹಾನಿಗಳ ಸಂಬಂಧ ಪರಿಹಾರ ಪಾವತಿಸಲಾಗಿದ್ದು, ವಿವರ ಇಂತಿದೆ. ಮಾನವ ಜೀವ ಹಾನಿ ಅನುಕಂಪ ಭತ್ಯೆ 21 ಪ್ರಕರಣಗಳಿಗೆ ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಡಿ 1.370 ಕೋಟಿ ರೂ, ಜಾನುವಾರು ಪ್ರಾಣಹಾನಿ 127 ಪ್ರಕರಣಗಳಿಗೆ ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ನಡಿ 0.282 ಕೋಟಿ ರೂ, ದಿನಬಳಕೆಯ ವಸ್ತು ಹಾನಿಗೆ ಸಂಬಂಧಿಸಿದಂತೆ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 3800 ರೂ ನಂತೆ) 4,400 ಪ್ರಕರಣಗಳಿಗೆ ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್‍ನಡಿ 1.672 ಕೋಟಿ ರೂ, ವಾಸದ ಮನೆ ಹಾನಿ 4,254 ಪ್ರಕರಣಗಳಿಗೆ ಎನ್‍ಡಿಆರ್‍ಎಫ್/ಎಸ್‍ಡಿಆರ್‍ಎಫ್‍ನಡಿ 15.087 ಕೋಟಿ ರೂ, ಮನೆಹಾನಿ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 50 ಸಾವಿರ ರೂ ನಂತೆ) 1,021 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5.105 ಕೋಟಿ ರೂ, ವಾಸದ ಮನೆ ಹಾನಿ 480 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 0.480 ಕೋಟಿ ರೂ, ವಾಸದ ಮನೆ ಹಾನಿ 415 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 2.075 ಕೋಟಿ ರೂ, ವಾಸದ ಮನೆ ಹಾನಿ 54 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 1.080 ಕೋಟಿ ರೂ, ಬೆಳೆಹಾನಿ 32,198 ಪ್ರಕರಣಗಳಿಗೆ ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ 38.050 ಕೋಟಿ ರೂ, ಬೆಳೆಹಾನಿ 1,185 ಪ್ರಕರಣಗಳಿಗೆ ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ 2.970 ಕೋಟಿ ರೂ, ಬೆಳೆಹಾನಿ 351 ಪ್ರಕರಣಗಳಿಗೆ ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ 20.920 ಕೋಟಿ ರೂ, ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89.091 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಉಳಿದಂತೆ ಎಲ್ಲಾ ಫಲಾನುಭವಿಗಳ ವಿವರವನ್ನು ಕೊಡಗು ಜಿಲ್ಲಾ ವೆಬ್‍ಸೈಟ್ hಣಣಠಿs://ಞoಜಚಿgu.ಟಿiಛಿ.iಟಿ ನಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಪರಿಹಾರ ಸಂಬಂಧಿಸಿದ ವಿಚಾರಗಳಲ್ಲಿ ಯಾವದೇ ತಕರಾರುಗಳಿದ್ದಲ್ಲಿ ಸಾರ್ವಜನಿಕರು ತಾ. 29 ರಂದು ಜಿಲ್ಲಾಡಳಿತ ಭವನದ ಎರಡನೇ ಮಹಡಿಯ ಕೊಠಡಿ ಸಂಖ್ಯೆ 18 ರ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿರುವ ಪರಿಹಾರ ಅದಾಲತ್‍ಗೆ ಆಗಮಿಸಿ ಗೊಂದಲಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.