ಮಡಿಕೇರಿ, ಮೇ 27: ವೀರಾಜಪೇಟೆ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಪೊನ್ನಂಪೇಟೆ, ಹುದಿಕೇರಿ ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಮರಗೋಡು, ಪೊನ್ನಂಪೇಟೆ, ಶ್ರೀಮಂಗಲ ಹಾಗೂ ಬಿರುನಾಣಿ ಇಲ್ಲಿಗೆ ಪ್ರವೇಶ ಕೋರಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರವರ್ಗ-1ರ ಅಭ್ಯರ್ಥಿಗಳಿಗೆ ವಾರ್ಷಿಕ ಆದಾಯ ರೂ. 1 ಲಕ್ಷ ಹಾಗೂ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ವಾರ್ಷಿಕ ಆದಾಯ ರೂ. 44,500 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಆದಾಯ ಮಿತಿ ರೂ. 2 ಲಕ್ಷಗಳಾಗಿರುತ್ತದೆ.
ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಸಂಬಂಧಪಟ್ಟ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪೊನ್ನಂಪೇಟೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಭ್ಯರ್ಥಿಯ 4 ಭಾವಚಿತ್ರ, ಬ್ಯಾಂಕ್ ಪಾಸ್ ಪುಸ್ತಕದ ಮೊದಲ ಪುಟದ ಜೆರಾಕ್ಸ್ ಪ್ರತಿ, ವಾಸ ದೃಢೀಕರಣ ಪತ್ರ, ಆಧಾರ್ ಕಾರ್ಡ್‍ನ ಪ್ರತಿ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ ಹಾಗೂ ಹಿಂದಿನ ತರಗತಿಯ ದೃಢೀಕೃತ ಅಂಕಪಟ್ಟಿಯ ನಕಲು ಹಾಗೂ ಸ್ಯಾಟ್ ಸಂಖ್ಯೆಯನ್ನು ಅರ್ಜಿಯ ಮೇಲೆ ಕಡ್ಡಾಯವಾಗಿ ನಮೂದಿಸಿ ತಾ. 15.6.2019ರ ಸಂಜೆ5 ಗಂಟೆಯೊಳಗೆ ಸಲ್ಲಿಸಲು ಕೋರಲಾಗಿದೆ. ಅರ್ಜಿದಾರರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ, ಪೊನ್ನಂಪೇಟೆ ಕಚೇರಿ 08274-249211 ಅಥವಾ 944820 5919 ರಲ್ಲಿ ಸಂಪರ್ಕಿಸಬಹುದು.