ವೀರಾಜಪೇಟೆ, ಮೇ 27: ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮತ್ತು ಸುವರ್ಣ ಚಾರಿಟೆಬಲ್ ಟ್ರಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ವೀರಾಜಪೇಟೆಯ ಆಯುಷ್.ಎಂ.ಡಿ. ಗಾಯನ ವಿಭಾಗದಲ್ಲಿ 2018-19ನೇ ಸಾಲಿನ ರಾಜ್ಯ ಮಟ್ಟದ ‘ಸುವರ್ಣಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೈಸೂರಿನ ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಗೋಣಿಕೊಪ್ಪಲಿನ ಕಾಪ್ಸ್ ಶಾಲೆಯ ವಿದ್ಯಾರ್ಥಿಯಾದ ಆಯುಷ್ ವೀರಾಜಪೇಟೆಯ ವೈದ್ಯ ದಂಪತಿಗಳಾದ ಡಾ||.ಎಂ.ವಿ. ದೀಪಕ್ ಹಾಗೂ ಡಾ|| ಸುಪ್ರಿಯಾ ಅವರ ಪುತ್ರ.