ಶ್ರೀಮಂಗಲ, ಮೇ 30: ಜಿಲ್ಲೆಯ ಗಡಿಭಾಗವಾದ ಕುಟ್ಟದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪೆÇ್ರ. ನಂಜುಂಡಸ್ವಾಮಿ ಬಣದ ನೂತನ ಕಚೇರಿ ಉದ್ಘಾಟಿಸಲಾಯಿತು. ರೈತ ಸಂಘದ ಅಧ್ಯಕ್ಷ ಚಿಮ್ಮಂಗಡ ಗಣೇಶ್ ಗಣಪತಿ ಹಾಗೂ ಪ್ರಧಾನ ಕಾರ್ಯದರ್ಶಿ ಕಳ್ಳಿಚಂಡ ಧÀನು, ಸಂಘದ ಇತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಉದ್ಘಾಟನೆಗೂ ಮುನ್ನ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಚಿಮ್ಮಂಗಡ ಗಣೇಶ್ ಗಣಪತಿ ಅವರು, ಸ್ಥಳೀಯ ರೈತರ ಸಮಸ್ಯೆಗಳನ್ನು ಅರಿತು ಅದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಾಗೂ ಸ್ಥಳೀಯ ರೈತರೊಂದಿಗೆ ನಿರಂತರ ಒಡನಾಟ ಇಟ್ಟುಕೊಳ್ಳುವ ನಿಟ್ಟಿನಲ್ಲಿ ಕಚೇರಿಯನ್ನು ಸ್ಥಾಪಿಸಲಾಗಿದೆ. ಸ್ಥಳೀಯ ರೈತರಿಗೆ ಸಂಘದ ಮೂಲಕ ಅವರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು ಎಂದು ಹೇಳಿದರು.