ಮಡಿಕೇರಿ, ಮೇ 30 : ಬೆಂಗಳೂರಿನ ಅಮೃತ ಸ್ಕೂಲ್ ಆಫ್ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಮಡಿಕೇರಿ ತಾಲೂಕಿನ ಮಳೆಹಾನಿ ಸಂತ್ರಸ್ತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಿನ ಚೆಕ್ ವಿತರಿಸಲಾಯಿತು.ನಗರದ ಟ್ರೈಕಲರ್ ಅಕಾಡೆಮಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಆರು ವಿದ್ಯಾರ್ಥಿಗಳಿಗೆ ತಲಾ 9 ಸಾವಿರ ರೂ.ಗಳಂತೆ ಒಟ್ಟು 54 ಸಾವಿರ ರೂ.ಗಳನ್ನು ಚೆಕ್ ರೂಪದಲ್ಲಿ ಹಸ್ತಾಂತರಿಸಲಾಯಿತು.
ಈ ಸಂದರ್ಭ ಅಮೃತ ಸ್ಕೂಲ್ ಆಫ್ ಇಂಜಿನಿಯರ್ ಕಾಲೇಜಿನ ಇಂಗ್ಲೀಷ್ ಪ್ರಾಧ್ಯಾಪಕರಾದ ದೀಪ್ತಿ ಜನಾರ್ಧನ್, ಟ್ರೈಕಲರ್ ಅಕಾಡೆಮಿಯ ಮುಖ್ಯಸ್ಥೆ ಮೋಕ್ಷಿತಾ ಪಟೇಲ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.