ಗುಡ್ಡೆಹೊಸೂರು, ಮೇ 30: ಗುಡ್ಡೆಹೊಸೂರಿನ ಹೃದಯಭಾಗದಲ್ಲಿ ಸಂಪರ್ಕ ಹೊಂದಿರುವ ವಿದ್ಯುತ್ ಕಂಬವೊಂದು ಇಂದೋ ನಾಳೆಯೋ ಮುರಿದು ಬೀಳುವ ಸ್ಥಿತಿಯಲ್ಲಿದೆ. ಈ ಕಂಬವನ್ನು ಬದಲಾಯಿಸುವಂತೆ ಈ ಹಿಂದೆ ಹಲವು ಬಾರಿ ಸೆಸ್ಕ್ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹೆಚ್ಚಿನ ಅನಾಹುತಗಳು ಸಂಭವಿಸುವದಕ್ಕಿಂತ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಈ ಕಂಬವನ್ನು ಬದಲಾಯಿಸುವಂತೆ ನಾಗರಿಕರು ಒತ್ತಾಯಿಸಿದ್ದಾರೆ. -ಗಣೇಶ್