ಸೋಮವಾರಪೇಟೆ, ಮೇ 30: ಇಲ್ಲಿನ ವಿರಕ್ತ ಮಠಾಧೀಶರಾಗಿದ್ದ ಲಿಂಗೈಕ್ಯ ಶ್ರೀ ಗುರುಸಿದ್ದ ಮಹಾಸ್ವಾಮಿಗಳ 32ನೇ ವರ್ಷದ ಪುಣ್ಯಾರಾಧನೆ ಮಹೋತ್ಸವ, ಬಸವ ಜಯಂತಿ ಹಾಗೂ ವಟುಗಳಿಗೆ ಲಿಂಗದೀಕ್ಷಾ ಕಾರ್ಯಕ್ರಮ ಜೂನ್ 2 ರಂದು ಇಲ್ಲಿನ ವಿರಕ್ತ ಮಠದಲ್ಲಿ ನಡೆಯಲಿದೆ ಎಂದು ಮಠಾಧೀಶ ವಿಶ್ವೇಶ್ವರ ಸ್ವಾಮೀಜಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. 2 ರ ಬೆಳಿಗ್ಗೆ 7 ಗಂಟೆಗೆ ಲಿಂಗಾಯಿತ ವಟುಗಳಿಗೆ ಬಸವ ಕಲ್ಯಾಣ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ಲಿಂಗ ದೀಕ್ಷಾ ಸಂಸ್ಕಾರಗಳು ನಡೆಯಲಿವೆ. ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ರಾವಂದೂರು ಮುರುಘಾಮಠದ ಮೋಕ್ಷಪತಿ ಸ್ವಾಮೀಜಿ ವಹಿಸಲಿದ್ದಾರೆ ಎಂದರು.
ವೀರಾಜಪೇಟೆ ಅರಮೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲು ಮಠದ ಮಹಾಂತ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲಹಳ್ಳಿ ಮಠದ ರುದ್ರಮುನಿ ಸ್ವಾಮೀಜಿ, ತೊರೆನೂರು ವಿರಕ್ತ ಮಠದ ಮಲ್ಲೇಶ ಸ್ವಾಮೀಜಿ, ದುಂಡಳ್ಳಿ ಮುದ್ದಿನ ಮಠದ ಅಭಿವನ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿಡಿಗಳಲೆ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಬೆಳಿಗ್ಗೆ 10.30 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಮಠದ 158 ನೇ ಶಿವಾನುಭವ ಗೋಷ್ಠಿ ಸಮ್ಮೇಳನ ನಡೆಯಲಿದೆ. ಚಿತ್ರದುರ್ಗ ಮುರುಘಾಮಠದ ಶೂನ್ಯ ಪೀಠಾಧ್ಯಕ್ಷ ಶಿವಮೂರ್ತಿ ಮುರುಘ ರಾಜೇಂದ್ರ ಮಹಾ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲೆ ಹೆಬ್ಬಾಳು ವಿರಕ್ತ ಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ, ಶಾಸಕ ಅಪಚ್ಚುರಂಜನ್, ವೀರಶೈವ ಸಮಾಜದ ಯಜಮಾನ ಕೆ.ಎನ್ ಶಿವಕುಮಾರ್, ಶೆಟ್ರು ಕೆ.ಎನ್. ತೇಜಸ್ವಿ, ಅಕ್ಕನ ಬಳಗದ ಆಧ್ಯಕ್ಷೆ ಜಲಜಾ ಶೇಖರ್, ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಹೆಚ್.ಎಸ್. ಮಲ್ಲಿಕಾರ್ಜುನ್, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಸ್. ಮಹೇಶ್, ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಕೆ.ಬಿ. ಹಾಲಪ್ಪ, ಶರಣ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಮಹಾದೇವಪ್ಪ ಭಾಗವಹಿಸಲ್ಲಿದ್ದಾರೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ ಸಭಾ ಸಂಚಾಲಕ ಬಿ.ಆರ್. ಮೃತ್ಯುಂಜಯ, ಬಿ.ಪಿ ಶಿವಕುಮಾರ್ ಉಪಸ್ಥಿತರಿದ್ದರು.