ಸೋಮವಾರಪೇಟೆ, ಮೇ 30: ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಇಲ್ಲಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಜೂ.1ರಿಂದ ಉಚಿತ ಯೋಗ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಶಿಕ್ಷಕಿ ರಾಗಿಣಿ ತಿಳಿಸಿದ್ದಾರೆ.
ಪಟ್ಟಣದ ಹೋಮಿಯೋಪತಿ ಆಸ್ಪತ್ರೆಯ ಸಭಾಂಗಣದಲ್ಲಿ ಜೂ. 1ರಿಂದ ಪ್ರತಿದಿನ ಸಂಜೆ 6 ರಿಂದ 7ರವರೆಗೆ ಉಚಿತ ಯೋಗ ತರಬೇತಿ ನೀಡಲಾಗುವದು. ಹೆಚ್ಚಿನ ಮಾಹಿತಿಗೆ 9945987717 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದ್ದಾರೆ.