ಗೋಣಿಕೊಪ್ಪ ವರದಿ, ಮೇ30 : ಜೂನ್ 8 ಹಾಗೂ 9 ರಂದು ಗೋಣಿಕೊಪ್ಪ ಕಾವೇರಿ ಕಾಲೇಜು ಆವರಣದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆಯಲಿರುವ ಬೊಳ್ಳಿ ನಮ್ಮೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಹಾಗೂ ಸಚಿವರುಗಳನ್ನು ಅಕಾಡೆಮಿ ವತಿಯಿಂದ ಅಧಿಕೃತವಾಗಿ ಆಹ್ವಾನಿಸಲಾಯಿತು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪೆಮ್ಮಂಡ ಪೊನ್ನಪ್ಪ ಅವರ ಮುಂದಾಳತ್ವದಲ್ಲಿ ಅಕಾಡೆಮಿ ಸದಸ್ಯರು ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿ.ಕೆ ಶಿವಕುಮಾರ್ ಹಾಗೂ ಅಕಾಡೆಮಿ ಸ್ಥಾಪನೆಗೆ ಮುಖ್ಯ ಪಾತ್ರವಹಿಸಿದ ಮಾಜಿ ಕೇಂದ್ರ (ಮೊದಲ ಪುಟದಿಂದ) ಸಚಿವ ವೀರಪ್ಪ ಮೊಯ್ಲಿ ಅವರುಗಳಿಗೆ ಆಮಂತ್ರಣ ಪತ್ರ ನೀಡಿ ಅಹ್ವಾನಿಸಿದರು. ಅಕಾಡೆಮಿ ಸದಸ್ಯರುಗಳಾದ ಆಪಟ್ಟೀರ ಟಾಟು ಮೊಣ್ಣಪ್ಪ, ತೋರೇರ ಮುದ್ದಯ್ಯ, ಸುಳ್ಳಿಮಾಡ ಭವಾನಿ ಕಾವೇರಿಯಪ್ಪ, ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಹಾಗೂ ಉಮೇಶ್ ಕೇಚಮಯ್ಯ ಇದ್ದರು.
- ಸುದ್ದಿಪುತ್ರ