ಚೆಟ್ಟಳ್ಳಿ, ಮೇ 30: ಚೆಟ್ಟಳ್ಳಿ ಪ್ರಾ.ಕೃ.ಪ.ಸ.ಸಂಘದಲ್ಲಿ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಭೂಮಿ ಪೂಜೆ ಸಲ್ಲಿಸುವ ಮೂಲಕ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದರು. ಚೆಟ್ಟಳ್ಳಿ ಸಹಕಾರ ಸಂಘದ ಮುಖ್ಯ ಕಚೇರಿ ಕಟ್ಟಡದ ಮೇಲ್ಛಾವಣಿ ಮೇಲೆ 2ನೇ ಅಂತಸ್ತಿನಲ್ಲಿ ಅಂದಾಜು ರೂ 35 ಲಕ್ಷ ವೆಚ್ಚದ ವ್ಯಾಪಾರ ಮಳಿಗೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.