ಬೆಂಗಳೂರು, ಮೇ 30: ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ಪ್ರಜಾವಾಣಿ ದಿನಪತ್ರಿಕೆಯ ನಿವೃತ್ತ ಸಂಪಾದಕ ಪದ್ಮರಾಜ ದಂಡಾವತಿ ಅವರು ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜ್ಯಪಾಲರ ಆದೇಶ ಅನುಸಾರ ಕನ್ನಡ ಸಂಸ್ಕøತಿ ಮತ್ತು ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಹೆಚ್. ಅನುಸೂಯಮ್ಮ ಈ ಆದೇಶ ಹೊರಡಿಸಿದ್ದು ಮುಂದಿನ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಈ ನೇಮಕಾತಿ ಮಾಡಿ ಆದೇಶಿಸಿದ್ದಾರೆ.