ಮಡಿಕೇರಿ, ಜೂ. 1: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಶನಿವಾರ ನಗರದ ಗದ್ದುಗೆಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಚಂದ್ರಶೇಖರ್, ಪೌರಾಯುಕ್ತರಾದ ರಮೇಶ್, ಪ್ರಾಚ್ಯ ವಸ್ತು ಇಲಾಖೆಯ ಅಧಿಕಾರಿ ರೇಖಾ, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ರಾಘವೇಂದ್ರ, ರಾಜೀವ್ ಗಾಂಧಿ ವಸತಿ ನಿಗಮದ ಎಂಜಿನಿಯರ್ ಶ್ರೀನಿವಾಸ್, ಇತರರು ಇದ್ದರು.