ಸೋಮವಾರಪೇಟೆ,ಮೇ 31: ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಜೂನ್ 8ರಂದು ತಾಲೂಕಿನ ಶಾಂತಳ್ಳಿ ಗ್ರಾಮದಲ್ಲಿ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.
ಶಾಂತಳ್ಳಿಯ ಶ್ರೀಕುಮಾರಲಿಂಗೇಶ್ವರ ದೇವಾಲಯದ ಆವರಣದಲ್ಲಿ ಸಮ್ಮೇಳನ ನಡೆಯಲಿದ್ದು, ಅಂದು ಬೆಳಿಗ್ಗೆ 8ಗಂಟೆಗೆ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವದು. ತಹಶೀಲ್ದಾರ್ ಗೋವಿಂದರಾಜು ಅವರು ರಾಷ್ಟ್ರಧ್ವಜ, ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ಸಾಗರ್ ನಾಡಧ್ವಜ, ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ಅವರು ಪರಿಷತ್ನ ಧ್ವಜಗಳನ್ನು ಆರೋಹಣ ಮಾಡಲಿದ್ದಾರೆ.
ಸಮ್ಮೇಳನದ ಅಂಗವಾಗಿ ಶಾಂತಳ್ಳಿಯಲ್ಲಿ ವಿವಿಧ ದ್ವಾರಗಳನ್ನು ನಿರ್ಮಿಸಲಾಗುವದು. ಬೆಳಿಗ್ಗೆ 9 ಗಂಟೆಗೆ ತಲ್ತರೆಶೆಟ್ಟಳ್ಳಿ ಕೂಡುರಸ್ತೆಯಿಂದ ಸಮ್ಮೇಳನಾಧ್ಯಕ್ಷರಾದ ಡಾ. ಹೆಬ್ಬಾಲೆ ಕೆ. ನಾಗೇಶ್ ಅವರ ಮೆರವಣಿಗೆ ನಡೆಯಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ್ ತಿಳಿಸಿದ್ದಾರೆ.
ಹರಗದ ಅಪ್ಪಯ್ಯ ಸಭಾಂಗಣ ಮತ್ತು ಗೌಡನ ದೊಡ್ಡಯ್ಯ ಪ್ರಧಾನ ವೇದಿಕೆಯನ್ನು ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ ಉದ್ಘಾಟಿಸಲಿದ್ದು, ಸಮ್ಮೇಳನವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ. ವಿಜೇತ್ ವಹಿಸಲಿದ್ದಾರೆ.
ಸಮ್ಮೇಳನದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಲೋಕೇಶ್ಸಾಗರ್, ಸಂಸದ ಪ್ರತಾಪ್ಸಿಂಹ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಜಲಾ ಕಾಳಪ್ಪ, ಸಮ್ಮೇಳನಾಧ್ಯಕ್ಷ ಹೆಬ್ಬಾಲೆ ಕೆ.ನಾಗೇಶ್, ಶಾಂತಳ್ಳಿ ಗ್ರಾ.ಪಂ. ಅಧ್ಯಕ್ಷ ಬಗ್ಗನ ಅನಿಲ್ಕುಮಾರ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.