ಮಡಿಕೇರಿ, ಜೂ. 1: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ತಾ. 8 ಮತ್ತು 9 ರಂದು ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಬೊಳ್ಳಿನಮ್ಮೆ ಕಾರ್ಯಕ್ರಮ ನಡೆಯಲಿದೆ. ತಾ. 8 ರಂದು ಬೆಳಿಗ್ಗೆ 9 ಗಂಟೆಗೆ ಗೋಣಿಕೊಪ್ಪ ಪಾಲಿಬೆಟ್ಟ ಜಂಕ್ಷನ್‍ನಲ್ಲಿ ಕೊಡವ ಜಾನಪದ ಸಾಂಸ್ಕøತಿಕ ಮೆರವಣಿಗೆ ಉದ್ಘಾಟನೆ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಮೆರವಣಿಗೆ ಉದ್ಘಾಟಿಸಲಿದ್ದಾರೆ. ನಂತರ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಓ ಕೆ. ಲಕ್ಷ್ಮಿಪ್ರಿಯಾ ಇತರರು ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಿಗ್ಗೆ 10.30 ಗಂಟೆಗೆ ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.