ಸೋಮವಾರಪೇಟೆ, ಜೂ. 1: ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಅಭೂತಪೂರ್ವ ವಿಜಯ ಸಾಧಿಸಿದ ಹಿನ್ನೆಲೆ ತಾ. 3ರಂದು ಪಟ್ಟಣದಲ್ಲಿ ವಿಜಯೋತ್ಸವ ಮೆರವಣಿಗೆ ನಡೆಯಲಿದೆ ಎಂದು ಬಿಜೆಪಿ ನಗರಾಧ್ಯಕ್ಷ ಸೋಮೇಶ್ ತಿಳಿಸಿದ್ದಾರೆ.

ತಾ. 3ರಂದು ಬೆಳಿಗ್ಗೆ 10 ಗಂಟೆಗೆ ಕಕ್ಕೆಹೊಳೆ ವಿವೇಕಾನಂದ ವೃತ್ತದಿಂದ ಮೆರವಣಿಗೆ ನಡೆಸಿ ಜೇಸೀ ವೇದಿಕೆಯಲ್ಲಿ ಬಹಿರಂಗ ಸಭೆ ನಡೆಸಲಾಗುವದು. ಸಂಸದ ಪ್ರತಾಪ್ ಸಿಂಹ, ಶಾಸಕ ಅಪ್ಪಚ್ಚು ರಂಜನ್ ಸೇರಿದಂತೆ ಪಕ್ಷದ ಇತರ ಮುಖಂಡರುಗಳು ವಿಜಯೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.