ಸೋಮವಾರಪೇಟೆ: ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ದಿನದಂದು ಶಿಕ್ಷಕರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ತರಗತಿ ಪ್ರಾರಂಭಕ್ಕೂ ಮುನ್ನ, ಶಾಲಾ ಆವರಣವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ನಂತರ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಎಂ.ಜೆ. ಅಣ್ಣಮ್ಮ ಮಾತನಾಡಿ, ವಿದ್ಯಾರ್ಥಿಗಳು ಗುರಿ ಇರಿಸಿಕೊಂಡು, ಅದನ್ನು ಸಾಧಿಸಲು ಮುಂದಾಗಬೇಕು. ಶಾಲೆಗೆ ಗೈರಾಗದೆ ಅಂದಿನ ಪಾಠವನ್ನು ಅಂದೇ ಅಭ್ಯಾಸ ಮಾಡಬೇಕೆಂದರು.

ಸಭಾ ಕಾರ್ಯಕ್ರಮವನ್ನು ಎಸ್‍ಡಿಎಂಸಿ ಅಧ್ಯಕ್ಷರಾದ ಕುಶಾಲರವರು ಉದ್ಘಾಟಿಸಿದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕರುಗಳಾದ ರಮೇಶ್, ಚಂದ್ರಕಲಾ, ಶಾರದ, ರಾಜೇಶ್ವರಿ, ಎನ್.ಎಂ. ನಾಗೇಶ್ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

ಕುಶಾಲನಗರ: ಕುಶಾಲನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡ ನೆಡುವ ಮೂಲಕ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಾಯಿತು. ಸ್ಥಳೀಯ ಕಾವೇರಿ ನದಿ ಸ್ವಚ್ಛತಾ ಆಂದೋಲನ ಪದಾಧಿಕಾರಿಗಳು ಶಾಲೆಯಲ್ಲಿ ಪ್ರಾರಂಭೋತ್ಸವ ಸಂದರ್ಭ ಗಿಡಗಳನ್ನು ಮಕ್ಕಳಿಂದ ನೆಡಿಸುವ ಮೂಲಕ ಮುಖ್ಯ ಅತಿಥಿಗಳು ಮಕ್ಕಳಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ದಿನೇಶ್‍ಕುಮಾರ್ ಮಾತನಾಡಿ, ಮಕ್ಕಳು ಬಾಲ್ಯದಿಂದಲೇ ಪರಿಸರದ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಜವಾಬ್ದಾರಿ ಹೊಂದಬೇಕು ಎಂದರು.

ಈ ಸಂದರ್ಭ ಪ್ರಾಸ್ತಾವಿಕವಾಗಿ ಮಾತನಾಡಿದ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್. ಚಂದ್ರಮೋಹನ್, ಕುಶಾಲನಗರ ಪಟ್ಟಣವನ್ನು ಹಸಿರೀಕರಣ ನಗರವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನೆರಳು ಗಿಡಗಳನ್ನು ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಮುಖ್ಯ ರಸ್ತೆ, ಸರಕಾರಿ ಶಾಲೆಗಳ ಆವರಣದಲ್ಲಿ ನೂರಕ್ಕೂ ಅಧಿಕ ನೆರಳು ಗಿಡಗಳನ್ನು ನೆಟ್ಟು ಬೆಳೆಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಟಿ. ಶ್ರೀನಿವಾಸ್, ಮುಖ್ಯ ಶಿಕ್ಷಕಿ ಕೆ.ಆರ್. ರಾಣಿ, ನದಿ ಸ್ವಚ್ಛತಾ ಆಂದೋಲನದ ಪ್ರಮುಖರಾದ ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದನ್, ಬಿ.ಜೆ. ಅಣ್ಣಯ್ಯ, ಜಿ.ಪಂ. ಮಾಜಿ ಉಪಾಧ್ಯಕ್ಷರಾದ ಕಮಲ ಗಣಪತಿ, ಶಾಲಾ ಶಿಕ್ಷಕರಾದ ಉಷಾ, ಸರಳರಾಣಿ, ಭವ್ಯ, ನೀಲಮ್ಮ, ಕುಸುಮ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಇದ್ದರು.

ಕೂಡಿಗೆ: ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು.

ಶಾಲಾ ಆವರಣವನ್ನು ಸ್ವಚ್ಛಗೊಳಿಸಿ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯವರು ಶಾಲೆಗೆ ಹಾಜರಾದ ವಿಧ್ಯಾರ್ಥಿಗಳಿಗೆ ಹೂವನ್ನು ನೀಡಿ ಸ್ವಾಗತಿಸಿ ಸಿಹಿ ವಿತರಿಸಿದರು.

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ವಾಣಿ, ಸಹ ಶಿಕ್ಷಕರಾದ ಭಾಗ್ಯಮ್ಮ, ವಿಜಯಲಕ್ಷ್ಮಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಅನುಸೂಯ ಹಾಗೂ ಗ್ರಾಮಸ್ಥರು ಹಾಜರಿದ್ದರು.

ವಾಲ್ನೂರು ತ್ಯಾಗತ್ತೂರು: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ನೋಟ್ ಬುಕ್ ವಿತರಿಸಲಾಯಿತು.

ಎಸ್.ಡಿ.ಎಂ.ಸಿ ಸದಸ್ಯರಾದ ಸರೀನಾ, ಮುಖ್ಯೋಪಾಧ್ಯಾಯರಾದ ಹೆಚ್.ಕೆ. ಕುಮಾರ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್ನುಗಳನ್ನು ವಿತರಿಸಿದರು.

ಈ ಸಂದರ್ಭ ಶಾಲಾ ಶಿಕ್ಷಕ ವೃಂದದವರಾದ ಆಶಾಮಣಿ, ಚೇತನ್ ಕುಮಾರ್, ಜಯಲಕ್ಷ್ಮಿ, ಸರೋಜ, ಗಂಗಮ್ಮ, ಶೋಭಾ, ಸುರೇಶ್ ಹಾಗೂ ಇತರರು ಇದ್ದರು.ಮೂರ್ನಾಡು: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಒಂದನೇ ತರಗತಿಯಿಂದ ಆರಂಭಗೊಂಡ ಆಂಗ್ಲ ಮಾಧ್ಯಮ ಉದ್ಘಾಟನಾ ಕಾರ್ಯಕ್ರಮ ಜರುಗಿತು.

ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಹೆಚ್.ಬಿ. ದಿನೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯ ಶಿಕ್ಷಕಿ ಟಿ.ಕೆ. ಪುಷ್ಪಲತಾ ಮಾತನಾಡಿ ಈ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಗೊಂಡಿದ್ದು, ಪೋಷಕರು ಮಕ್ಕಳನ್ನು ದಾಖಲಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಶಾಲಾ ಎಸ್‍ಡಿಎಂಸಿ ಉಪಾಧ್ಯಕ್ಷ ಮನೋಜ್, ಸದಸ್ಯ ರಘು, ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಸದಸ್ಯ ರವಿ, ಪೋಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.

ಸೋಮವಾರಪೇಟೆ: ತಾಲೂಕಿನ ಯಡವನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ರಜೆ ಮುಕ್ತಾಯಗೊಂಡ ಬಳಿಕ ಪ್ರಾರಂಭವಾದ ತರಗತಿಗಳಿಗೆ ಆಗಮಿಸಿದ ವಿದ್ಯಾರ್ಥಿಗಳನ್ನು, ಶಿಕ್ಷಕರು ಆರತಿ ಬೆಳಗಿ ಬರಮಾಡಿಕೊಂಡರು.

ತರಗತಿ ಪ್ರಾರಂಭಕ್ಕೂ ಮುನ್ನ ಶಾಲಾ ಆವರಣವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಈ ಸಂದರ್ಭ ಹಾಜರಿದ್ದ ಐಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಅಂದಿನ ಪಾಠವನ್ನು ಅಂದೇ ಕಲಿಯಬೇಕು. ಉತ್ತಮ ಶಿಕ್ಷಣ ಪಡೆಯುವದರೊಂದಿಗೆ ದೇಶಕ್ಕೆ ಉತ್ತಮ ಪ್ರಜೆಯಾಗಬೇಕೆಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಜೆ. ಲತೀಶ್ ಮತ್ತು ಉಪಾಧ್ಯಕ್ಷ ಡಿ.ಜಿ. ಚಂಗಪ್ಪ ಅವರುಗಳು ವಿದ್ಯಾರ್ಥಿಗಳಿಗೆÉ ನೋಟ್ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಎಂ.ಆರ್. ವನಜ, ಶಿಕ್ಷಕರಾದ ಹೆಚ್.ಎನ್. ನಿರ್ಮಲ, ಟಿ.ಕೆ. ಬಸವರಾಜು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಗೋಣಿಕೊಪ್ಪ: ಬಾಳೆಲೆ ವಿಜಯಲಕ್ಷ್ಮಿ ಪ್ರೌಢಶಾಲೆಯಲ್ಲಿ ಶಾಲಾ ಆರಂಭೊತ್ಸವ ಪ್ರಯುಕ್ತ ಈ ಬಾರಿ ಎಸ್ಸೆಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಹೆಸರುಗಳನ್ನು ಸ್ವಾಗತ ಬ್ಯಾನರ್‍ನಲ್ಲಿ ಪ್ರಕಟಿಸುವ ಮೂಲಕ ವಿದ್ಯಾರ್ಥಿಗಳನ್ನು ಬರ ಮಾಡಿಕೊಳ್ಳಲಾಯಿತು.

ಈ ಬಾರಿ ಎಸ್ಸೆಸೆಲ್ಸಿಯಲ್ಲಿ ಶಾಲೆಗೆ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಆರ್. ರಮಿತಾ, ಜೆ. ಎಂ. ಮಹೇಂದ್ರ, ಪ್ರಿತೇಶ್‍ಕುಮಾರ್, ಬಿ.ಎಸ್. ಆಕಾಶ್, ಕೆ.ಸಿ. ಚಂದ್ರು, ವೈ. ಆರ್. ಲತಾ, ಆರ್. ಲಲಿತಾ, ಟಿ.ಎಸ್. ರಿಷಾನ್ ಹಾಗೂ ಎಂ. ಆರ್. ಸುಷ್ಮಾ ಅವರ ಫೋಟೋ ಮುದ್ರಿಸಿ ಮಕ್ಕಳಲ್ಲಿ ಹೆಚ್ಚು ಅಂಕ ಪಡೆಯಲು ಸ್ಪೂರ್ತಿ ತುಂಬಲಾಯಿತು. ಸ್ವಾಗತ ಸಂದರ್ಭ ಮುಖ್ಯಶಿಕ್ಷಕ ಚಂದ್ರಶೇಖರ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಸಿದ್ದಾಪುರ: ಸಿದ್ದಾಪುರ ಸೇರಿದಂತೆ ಸುತ್ತಮುತ್ತ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಗುಹ್ಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿ ಪ್ರಸನ್ನ ಕುಮಾರಿ, ಕೊಂಡಂಗೇರಿ ಶಾಲೆಯಲ್ಲಿ ರವಿಕುಮಾರ್, ಹಾಲುಗುಂದ ಶಾಲೆಯಲ್ಲಿ ಭವಾನಿ, ಬೈರಂಬಾಡ ಶಾಲೆಯಲ್ಲಿ ಪದ್ಮ, ಅಮ್ಮತ್ತಿ ಒಂಟಿಯಂಗಡಿ ಶಾಲೆಯಲ್ಲಿ ಶೋಭ ಅವರು ಪುಸ್ತಕ ವಿತರಿಸಿದರು. ನಾಪೆÇೀಕ್ಲು: ನಾಪೆÇೀಕ್ಲು ವ್ಯಾಪ್ತಿಯ ವಿವಿಧ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಶಾಲೆಗಳಿಗೆ ತೋರಣ ಕಟ್ಟಿ ಅಲಂಕರಿಸುವದರ ಮೂಲಕ ಹಬ್ಬದ ವಾತಾವರಣ ನಿರ್ಮಿಸಿ ಮಕ್ಕಳನ್ನು ಬರಮಾಡಿಕೊಳ್ಳಲಾಯಿತು.

ಸಮೀಪದ ಬೇತು, ಚೆರಿಯಪರಂಬು, ಕುರಳಿಪರಂಬು, ಎಮ್ಮೆಮಾಡು, ಪಡಿಯಾಣಿ, ಚೆಯ್ಯಂಡಾಣೆ ಸೇರಿದಂತೆ ವಿವಿಧ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವವನ್ನು ನಡೆಸಲಾಯಿತು.

ಶಾಲಾ ಆರಂಭಕ್ಕೆ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಶಾಲಾ ಪರಿಸರವನ್ನು ಸ್ವತಃ ಶಿಕ್ಷಕರು ಸ್ವಚ್ಛಗೊಳಿಸಿದರು. ಕುಡಿಯುವ ನೀರಿನ ಟ್ಯಾಂಕ್ ಹಾಗೂ ಶೌಚಾಲಯಗಳನ್ನು ಶುಚಿಗೊಳಿಸಿದರು. ವಿವಿಧ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಲೋಟ, ತಟ್ಟೆಗಳನ್ನು ವಿತರಿಸಲಾಯಿತು. ಹಾಗೆಯೇ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಮರಳಿ ಶಾಲೆಗೆ ಕರೆತರಲು ದಾಖಲಾತಿ ಆಂದೋಲನವನ್ನು ಕೈಗೊಳ್ಳಲಾಯಿತು. ಜಾಥಾ, ಮನೆ ಮನೆ ಭೇಟಿ ಕಾರ್ಯಕ್ರಮದ ಮೂಲಕ ಪೆÇೀಷಕರಿಗೆ ತಿಳುವಳಿಕೆ ನೀಡಲಾಯಿತು. ಅಕ್ಷರ ದಾಸೋಹ ಕಾರ್ಯಕ್ರಮಕ್ಕಾಗಿ ಅಜ್ಜಿಮುಟ್ಟ, ಕುರೂಳಿ ಪರಂಬು ನೆಲಜಿ ಚಪ್ಪೆಂಡಡಿ ಪ್ರಾಥಮಿಕ ಶಾಲೆಯಲ್ಲಿ ಊಟದ ತಟ್ಟೆ ಹಾಗೂ ಲೋಟಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಕುಶಾಲನಗರ: ಕುಶಾಲನಗರ ಸಮೀಪದ ಮುಳ್ಳುಸೋಗೆ ಸರಕಾರಿ ಶಾಲೆಯಲ್ಲಿ ಕರ್ನಾಟಕ ಕಾವಲುಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಅವರ ನೇತೃತ್ವದಲ್ಲಿ ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾ ಪ್ರಾರಂಭೋತ್ಸವ ದಿನದಂದು ವಿದ್ಯಾರ್ಥಿಗಳಿಗೆ ಕಾವಲುಪಡೆ ಜಿಲ್ಲಾ ಘಟಕದ ವತಿಯಿಂದ ಉಚಿತವಾಗಿ ನೋಟ್ ಪುಸ್ತಕ, ಲೇಖನಿ ಸಾಮಗ್ರಿ ನೀಡುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಎಂ.ರೇಣುಕಾ, ಕಾವಲುಪಡೆ ಪ್ರಮುಖರಾದ ಸಿ.ಬಿ.ವಿಜಯಕುಮಾರ್, ಕುಮಾರ್, ಶಿವು, ಮೂಕಾಂಬಿಕೆ, ಇಂದಿರಾ, ಮಂಜುನಾಥ್ ಮತ್ತು ಶಿಕ್ಷಕಿಯರು ಇದ್ದರು.

ಸುಂಟಿಕೊಪ್ಪ: ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಮಕ್ಕಳಿಗೆ ಹೂ ನೀಡುವ ಮೂಲಕ ಶಿಕ್ಷಕರು ಸ್ವಾಗತಿಸಿದರು.

ಮುಖ್ಯ ಶಿಕ್ಷಕಿ ಸಿ.ಎ.ಗೀತಾ, ದೈಹಿಕ ಶಿಕ್ಷಣ ಶಿಕ್ಷಕ ನಂದ,ಶಿಕ್ಷಕರು ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿದರು. ಇದೇ ವೇಳೆ ಮಕ್ಕಳಿಗೆ ಪುಸ್ತಕಗಳÀನ್ನು ವಿತರಿಸಲಾಯಿತು. ಶಿಕ್ಷಕರಾದ ಸೌಭಾಗ್ಯ, ಲತಾ ಇತರರು ಇದ್ದರು.

ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ಮಕ್ಕಳಿಗೆ ಬಿಸಿಯೂಟದ ಸಂದರ್ಭ ಸಿಹಿ ವಿತರಿಸಿದರು. ಶಾಲಾ ಸ್ವಚ್ಛತೆ ನಂತರ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಶಿಕ್ಷಕರಾದ ಸಿ.ಟಿ. ಸೋಮಶೇಖರ್ ಮತ್ತು ಶಿಕ್ಷಕರು ಇದ್ದರು.