ಮಡಿಕೇರಿ, ಜೂ. 1: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಉಚಿತ ಯೋಗ ಶಿಬಿರವು ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದಲ್ಲಿ ತಾ. 3 ರಿಂದ 21 ರವರೆಗೆ ಬೆಳಗ್ಗೆ 6 ಗಂಟೆಯಿಂದ 7 ಗಂಟೆಯವರೆಗೆ ನಡೆಯಲಿದೆ. ಆಸಕ್ತರು ಹೆಸರು ನೋಂದಾಯಿಸಿಕೊಳ್ಳುವಂತೆ ಆಶ್ರಮದ ಅಧ್ಯಕ್ಷ ಬೋಧ ಸ್ವರೂಪ ನಂದಸ್ವಾಮೀಜಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ 08274- 249555, 08274-298244ನ್ನು ಸಂಪರ್ಕಿಸಬಹುದು.