ಮಡಿಕೇರಿ, ಜೂ. 1: ಜಿಲ್ಲೆಯಲ್ಲಿ ತಾ. 3 ರಿಂದ 17 ರವರೆಗೆ ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ-2019 ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನೆ ತಾ. 3 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ತಿಳಿಸಿದ್ದಾರೆ.