ಸೋಮವಾರಪೇಟೆ, ಜೂ. 1: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರವನ್ನು ಅಳವಡಿಸಬೇಕೆಂಬ ಸರ್ಕಾರದ ಆದೇಶದನ್ವಯ ತಾಲೂಕಿನ ಸರ್ಕಾರಿ ಕಚೇರಿಗಳಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮೂಲಕ ಬಸವೇಶ್ವರರ ಭಾವಚಿತ್ರಗಳನ್ನು ವಿತರಿಸಲಾಗುತ್ತಿದೆ.

ಇಲ್ಲಿನ ತಾಲೂಕು ಕಚೇರಿಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್ ಮತ್ತು ಗಿಡ್ಡಪ್ಪ ಅವರುಗಳು ಬಸವೇಶ್ವರರ ಭಾವಚಿತ್ರವನ್ನು ತಾಲೂಕು ತಹಶೀಲ್ದಾರ್ ಗೋವಿಂದರಾಜು ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಎಸ್. ಮಹೇಶ್ ಉಪಸ್ಥಿತರಿದ್ದರು.