ಸೋಮವಾರಪೇಟೆ, ಮೇ 31: ಸಮೀಪದ ಯಡೂರು ಬಿಟಿಸಿಜಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿನಲ್ಲಿ ಬಿಸಿಎ ಪದವಿ ತರಗತಿ ಪ್ರಾರಂಭಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಮೊದಲ 5 ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಮನವಿ ಮಾಡಿದ್ದಾರೆ.