ಡಿಪ್ಲೋಮಾ ಶಿಕ್ಷಣಕ್ಕೆ
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಈ ಸ್ಥಳಗಳಲ್ಲಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದೆ. ಈ ತರಬೇತಿ ಸಂಸ್ಥೆಗಳ ಮೂಲಕ ಸಹಕಾರ ಸಂಘ-ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು ಅವಧಿಯ “ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್” ತರಬೇತಿಯನ್ನು ತಾ. 1.7.2019 ರಿಂದ ಪ್ರಾರಂಭವಾಗುತ್ತದೆ. ಈ ತರಬೇತಿಯನ್ನು ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿಯನ್ನು ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಸಹಕಾರ ಸಂಘ/ಸಹಕಾರ ಇಲಾಖೆ/ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ. 18 ರಷ್ಟು ಸ್ಥಾನಗಳನ್ನು ತರಬೇತಿಗಾಗಿ ಮೀಸಲಿರಿಸಲಾಗಿರಬೇಕು. ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಇಂತಹ ಅಭ್ಯರ್ಥಿಗಳು ಮಾತ್ರ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದು. ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 400/-ಗಳ ಶಿಷ್ಯವೇತನವನ್ನು ನೀಡಲಾಗುವದು.
ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 6 ತಿಂಗಳ ವಿಶೇಷ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ಸಹ ನೀಡಲಾಗುವದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ತರಿಸಿಕೊಳ್ಳಲಾಗುವದು ಮತ್ತು ಈ ವರ್ಗದ ಅಭ್ಯರ್ಥಿಗಳು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರವರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇವರ ಮೂಲಕ ಅರ್ಜಿಗಳನ್ನು ತಾ. 31.5.2019 ರೊಳಗಾಗಿ ಸಲ್ಲಿಸಬಹುದು. ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು. ಈ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 500/- ಶಿಷ್ಯವೇತನವನ್ನು ನೀಡಲಾಗುವದು.
ಅರ್ಜಿ ಫಾರಂ ಮತ್ತು ವಿವರಣಾ ಪುಸ್ತಕವನ್ನು ತರಬೇತಿ ಸಂಸ್ಥೆಯಿಂದ ಪಡೆಯಬಹುದು. ಅರ್ಜಿ ಮತ್ತು ವಿವರಣಾ ಪುಸ್ತಕದ ಶುಲ್ಕ ರೂ. 75/-(ರೂ. ಎಪ್ಪತ್ತೈದು ಮಾತ್ರ)ಗಳನ್ನು ನಗದಾಗಿ ಪಾವತಿಸಿ ತರಬೇತಿ ಸಂಸ್ಥೆಯಲ್ಲಿ ಪಡೆಯಬಹುದು. ಅಂಚೆ ಮೂಲಕ ಪಡೆಯಲು ಇಚ್ಛಿಸುವವರು ರೂ. 125/- (ರೂ.ಒಂದು ನೂರ ಇಪ್ಪತ್ತೈದು ಮಾತ್ರ)ಗಳ ಡಿ.ಡಿ. ಮೂಲಕ ಪಾವತಿಸಿ ಪಡೆಯಬಹುದಾಗಿದೆ. ಅರ್ಜಿಯನ್ನು ಭರ್ತಿ ಮಾಡಿ ಆಯಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 08272-228437, 9902189872 ರಲ್ಲಿ ಸಂಪರ್ಕಿಸಲು ತಿಳಿಸಿದೆ.
ಕಾನೂನು ಪದವೀಧರರಿಂದ
ಪ್ರಸಕ್ತ (2019-20) ಸಾಲಿನ ವ್ಯಾಪ್ತಿಯಲ್ಲಿ ಆಡಳಿತ ನ್ಯಾಯಾಧೀಕರಣ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ತರಬೇತಿ ನೀಡಲು ತಿತಿತಿ.sತಿ.ಞಚಿಡಿ.ಟಿiಛಿ.iಟಿ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು, 40 ವರ್ಷ ವಯೋಮಿತಿಯೊಳಗಿರಬೇಕು, ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು 3 ಅಥವಾ 5 ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವದು. ತರಬೇತಿ ಅವಧಿಯು 4 ವರ್ಷಗಳಾಗಿದ್ದು, ಮಾಸಿಕ ರೂ.5 ಸಾವಿರಗಳ ಶಿಷ್ಯವೇತನವನ್ನು ನೀಡಲಾಗುವದು. ಅರ್ಜಿಯಲ್ಲಿ ಪೂರ್ಣ ಮಾಹಿತಿ ಇಲ್ಲದಿದ್ದಲ್ಲಿ ಅರ್ಜಿ ಅಪೂರ್ಣವಾಗಿದ್ದಲ್ಲಿ, ಅಂತಹ ಅರ್ಜಿಯನ್ನು ಪರಿಗಣಿಸಲಾಗುವದಿಲ್ಲ. ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿದ 3 ವರ್ಷದೊಳಗಾಗಿ ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೋಂದಾಯಿಸಿದ ನಂತರ ಶಿಷ್ಯವೇತನ ಮತ್ತು ಎನ್‍ರೋಲ್‍ಮೆಂಟ್ ಫೀಯನ್ನು ನೀಡತಕ್ಕದ್ದು.
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ವೇಳೆ ಮಹಿಳಾ ಅಭ್ಯರ್ಥಿಗಳಿಗೆ 135 ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (4 ವರ್ಷಗಳ ತರಬೇತಿಗೆ 1 ಬಾರಿ ಮಾತ್ರ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರುಗೊಳಿಸಿ ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ. ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲೆ,್ಲ ಮಡಿಕೇರಿ 08272-225531, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552, ಸೋಮವಾರಪೇಟೆ 08276-281115, ಪೊನ್ನಂಪೇಟೆ 08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಅವರು ತಿಳಿಸಿದ್ದಾರೆ.
ಶೀಘ್ರಲಿಪಿಗಾರರ ಹುದ್ದೆಗಳ ಭರ್ತಿಗೆ
ಧಾರವಾಡ ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ ಹಿಂಬಾಕಿ (ಬ್ಯಾಕ್‍ಲಾಗ್) ಶೀಘ್ರಲಿಪಿಗಾರರ ಒಂಭತ್ತು ಹುದ್ದೆಗಳ ಭರ್ತಿಗೆ (ಆನ್‍ಲೈನ್) ಮೂಲಕ ಅರ್ಜಿಗಳನ್ನು ಕರೆಯಲಾಗಿದೆ.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಇಲ್ಲವೇ ಕರ್ನಾಟಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿರಬೇಕು.
ಗಣಕ ಯಂತ್ರದಲ್ಲಿ ಬೆರಳಚ್ಚು ಮಾಡುವ ಜ್ಞಾನವು ಅವಶ್ಯಕವಾಗಿರುತ್ತದೆ. ವಯೋಮಿತಿ ಸಾಮಾನ್ಯ ವರ್ಗದವರಿಗೆ ಕನಿಷ್ಟ 18 ರಿಂದ 35. ಪ್ರವರ್ಗ 2ಎ, 2ಬಿ, 3ಎ, 3ಬಿಗೆ 38 ವರ್ಷಗಳು. ಪ್ರವರ್ಗ 1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ 40 ವರ್ಷಗಳು. ಹೆಚ್ಚಿನ ಮಾಹಿತಿಗಳನ್ನು hಣಣಠಿ:||ಜisಣಡಿiಛಿಣ.ಛಿouಡಿಣs.gov.iಟಿ / ಜhಚಿಡಿತಿಚಿಜ/oಟಿಟiಟಿe-ಡಿeಛಿಡಿuiಣmeಟಿಣ oಡಿ hಣಣಠಿ:||ಞಚಿಡಿಟಿಚಿಣಚಿಞಚಿರಿuಜiಛಿiಚಿಡಿಥಿ.ಞಚಿಡಿiಟಿiಛಿ.iಟಿ / ಜisಣಡಿiಛಿಣಡಿeಛಿಡಿuimeಟಿಣ.ಚಿsಠಿ ಇದರಿಂದ ಪಡೆದುಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು 25.6.2019 ಕೊನೆಯ ದಿನ.
ಕರ್ನಾಟಕ ಉಚ್ಚ ನ್ಯಾಯಾಲಯದ ಹುದ್ದೆಗಳ ಭರ್ತಿಗಾಗಿ
ಕರ್ನಾಟಕ ಉಚ್ಚ ನ್ಯಾಯಾಲಯ ವತಿಯಿಂದ 95 ಗ್ರೂಪ್-ಡಿ (ಜವಾನರು, ಕಾವಲುಗಾರರು, ಸ್ವಚ್ಛಗಾರರು ಮತ್ತು ಹೌಸ್ ಕೀಪಿಂಗ್ ಜವಾನರು) ಹುದ್ದೆಗಳ ಭರ್ತಿಗಾಗಿ ಆನ್‍ಲೈನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು hಣಣಠಿ://ಞಚಿಡಿಟಿಚಿಣಚಿಞಚಿರಿuಜiಛಿiಚಿಡಿಥಿ.ಞಚಿಡಿ.ಟಿiಛಿ.iಟಿ/ಡಿeಛಿಡಿuiಣmeಟಿಣ.ಚಿsಠಿ ಮುಖಾಂತರ ಜೂನ್ 3 ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಖ್ಯೆ 95 (ಗ್ರೂಪ್-ಡಿ). ಅಭ್ಯರ್ಥಿಗಳು ಕನಿಷ್ಟ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಆಗಿರತಕ್ಕದ್ದು. ಕನಿಷ್ಟ 18 ರಿಂದ ಗರಿಷ್ಠ 35 ವರ್ಷಗಳು. ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ. (3.6.2019ಕ್ಕೆ ಅನ್ವಯಿಸುವಂತೆ). ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು ರೂ. 100 ಹಾಗೂ ಇತರ ಹಿಂದುಳಿದ ವರ್ಗಗಳು ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200 ಅರ್ಜಿ ಶುಲ್ಕ ಪಾವತಿಸಬೇಕಿದೆ. ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಜೂನ್ 6 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ವೆಬ್‍ಸೈಟ್ hಣಣಠಿ://ಞಚಿಡಿಟಿಚಿಣಚಿಞಚಿರಿuಜiಛಿiಚಿಡಿಥಿ.ಞಚಿಡಿ.ಟಿiಛಿ.iಟಿ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.