ಕುಶಾಲನಗರ, ಜೂ.2: ಹಲವೆಡೆ ದರೋಡೆ ಕೋರರಿಂದ ಚಿನ್ನಾಭರಣ ಖರೀದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಕುಶಾಲನಗರದ ರಥಬೀದಿಯ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿರುವ ಘಟನೆ ಇಂದು ನಡೆದಿದೆ.

ಬೆಂಗಳೂರು ಉಪ್ಪಾರಪೇಟೆ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ರಥಬೀದಿಯ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜು ಮತ್ತು ಓರ್ವ ಬಾಲಕ ಸೇರಿದಂತೆ ಇಬ್ಬರನ್ನು ವಿಚಾರಣೆಗೆ ಕರೆದೊಯ್ದಿದ್ದಾರೆ ಎಂದು ಕುಶಾಲನಗರ ಪೊಲೀಸರು ತಿಳಿಸಿದ್ದಾರೆ. ಅಂದಾಜು 280 ಗ್ರಾಂ ಚಿನ್ನ ಈ ಅಂಗಡಿಗಳಲ್ಲಿ ಮಾರಾಟ ಮಾಡಿರುವದಾಗಿ ಆರೋಪಿಗಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.