ಆಲೂರು-ಸಿದ್ದಾಪುರ, ಜೂ. 2: ಆಲೂರು-ಸಿದ್ದಾಪುರ ಅರೆಭಾಷೆ ಗೌಡ ಸಮಾಜ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ತಾ. 6 ರಂದು 2ನೇ ವರ್ಷದ ಸಾರ್ವಜನಿಕರ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಈ ಕುರಿತು ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್ ಮತ್ತು ಪ್ರಧಾನ ಕಾರ್ಯದರ್ಶಿ ಕುಯ್ಯಮುಡಿ ಜಯಕುಮಾರ್ ಹಾಗೂ ಡಾ. ಸುಪರ್ಣ ಕೃಷ್ಣಾನಂದ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಆಸ್ಪತ್ರೆಯಲ್ಲಿ ರಕ್ತದಾನ ಮತ್ತು ಆರೋಗ್ಯ ತಪಾಸಣೆ ಯನ್ನು ಹಮ್ಮಿಕೊಳ್ಳಲಾಗಿದ್ದು, ಶಿಬಿರದಲ್ಲಿ 18 ವರ್ಷ ಮೇಲ್ಪಟ್ಟವರು ರಕ್ತದಾನ ಮಾಡಬಹುದು ಹಾಗೂ ಶಿಬಿರದಲ್ಲಿ ರಕ್ತ ಗುಂಪು ಪರೀಕ್ಷೆ, ರಕ್ತದೊತ್ತಡ ಮತ್ತು ಮಧುಮೇಹ ಮತ್ತು ಸಾಮಾನ್ಯ ಆರೋಗ್ಯ ತಪಾಸಣೆಯನ್ನು ನಡೆಸಲಾಗುತ್ತದೆ.