ಮಡಿಕೇರಿ, ಜೂ. 2: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಎ.ಕೆ. ಹ್ಯಾರಿಸ್ ಅಧಿಕಾರ ಸ್ವೀಕರಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯ ಹಾಗೂ ಜಿಲ್ಲಾ ನಾಯಕರಿಂದ ಕಾಂಗ್ರೆಸ್ ಧ್ವಜ ಸ್ವೀಕರಿಸುವ ಮೂಲಕ ಹ್ಯಾರಿಸ್ ಅಧಿಕಾರ ಪಡೆದರು. ಅಲ್ಪಸಂಖ್ಯಾತ ಘಟಕದ ನಿರ್ಗಮಿತ ಅಧ್ಯಕ್ಷ ಹಾಗೂ ವಕ್ಫ್ ಮಂಡಳಿಯ ಅಧ್ಯಕ್ಷ ಕೆ.ಎ. ಯಾಕುಬ್, ರಾಜ್ಯ ಉಪಾಧ್ಯಕ್ಷ ಹ್ಯಾರಿಸ್ ಎಡಪಾಲ, ಸಂಯೋಜಕ ಎಂ.ಎ. ಉಸ್ಮಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್‍ಕುಮಾರ್, ಕೆಪಿಸಿಸಿ ಸದಸ್ಯ ಟಿ.ಪಿ. ರಮೇಶ್, ಸಂಯೋಜಕ ಮಹಮ್ಮದ್ ಶಫಿ, ಪ್ರಮುಖರಾದ ಶೌಕತ್ ಅಲಿ, ಬಷೀರ್, ನಾಪೋಕ್ಲು ಗ್ರಾ.ಪಂ. ಅಧ್ಯಕ್ಷ ಇಸ್ಮಾಯಿಲ್, ಅಲ್ಪಸಂಖ್ಯಾತರ ಘಟಕದ ಮ್ಯಾಥ್ಯು, ಪ್ಯಾಟ್ರಿಕ್, ವಾಹಿದ್, ಕೆಪಿಸಿಸಿ ಕಾರ್ಯದರ್ಶಿ ನಾರಾಯಣ ಮತ್ತಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.
ನೂತನ ಅಧ್ಯಕ್ಷ ಎ.ಕೆ. ಹ್ಯಾರಿಸ್ ಹಾಗೂ ವಕ್ಫ್ ಅಧ್ಯಕ್ಷ ಕೆ.ಎ. ಯಾಕುಬ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.