ಮಡಿಕೇರಿ, ಜೂ. 2: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಪ್ರಕೃತಿ ವಿಕೋಪ, ವಿಪತ್ತು ಉಂಟಾದ ಸಂದರ್ಭದಲ್ಲಿ ಜನರ ರಕ್ಷಣೆ ಮತ್ತು ಸುರಕ್ಷತೆಗೆ ಸಾರ್ವಜನಿಕರು ಜಿಲ್ಲಾಡಳಿತವನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ 24x7 ನಿಸ್ತಂತು (ವೈಯರ್ಲೆಸ್) ನಿಯಂತ್ರಣ ಕೊಠಡಿಯನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಶನಿವಾರ ಉದ್ಘಾಟಿಸಿದರು.
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ, ಅತಿವೃಷ್ಟಿ ಹಾಗೂ ವಿಪತ್ತು ಘಟನೆಗಳು ಸಂಭವಿಸಿದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸನ್ನದ್ಧವಾಗಿದ್ದು ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಲು ಮತ್ತು ವರದಿ ಮಾಡಲು ಸಾರ್ವಜನಿಕರಿಗಾಗಿ ಮೀಸಲಾದ ವಾಟ್ಸಪ್ ಸಂಖ್ಯೆ 8550001077 ಗೆ ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಸಾರ್ವಜನಿಕರು ಜಿಲ್ಲಾಡಳಿತವನ್ನು ಸಂಪರ್ಕಿಸಬಹುದಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೆಕರ್, ಜಿ.ಪಂ. ಸಿಇಒ. ಕೆ. ಲಕ್ಷ್ಮಿಪ್ರಿಯ, ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು, ಉಪವಿಭಾಗಾಧಿಕಾರಿ ಟಿ. ಜವರೇಗೌಡ, ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಷಂಶುದ್ದೀನ್ ಹಾಗೂ ಇತರರು ಇದ್ದರು.