*ಗೋಣಿಕೊಪ್ಪಲು, ಜೂ. 4: ಹೊಗೆ ಮುಕ್ತ ಭಾರತ ನಿರ್ಮಾಣ ಮಾಡುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸನ್ನು ನನಸು ಮಾಡಲು ಎಲ್ಲರೂ ಸಹಕರಿಸಬೇಕು ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ಪೆÇನ್ನಂಪೇಟೆ ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ನಡೆದ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಗ್ಯಾಸ್ ವಿತರಿಸಿ ಅವರು ಮಾತನಾಡಿದರು.

ಫಲಾನುಭವಿಗಳು ಕೇಂದ್ರ ಸರ್ಕಾರದ ಉಜ್ವಲ್ ಯೋಜನೆಯಡಿ ಅನಿಲ ರಹಿತರಿಗೆ ವಿತರಿಸುತ್ತಿರುವ ಅನಿಲವನ್ನು ಪಡೆದುಕೊಳ್ಳಬೇಕು. ಇದೀಗಾಗಲೇ ಹಲವರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಆದರೆ ಮೊದಲ ಬಾರಿ ಪಡೆದುಕೊಂಡ ಅನಿಲವನ್ನು ಸಮರ್ಪಕವಾಗಿ ಬಳಸಿಕೊಂಡಿಲ್ಲ. ವಾರ್ಷಿಕವಾಗಿ ಏಕ ಸಿಲಿಂಡರ್ ಬಳಕೆಯಾಗಿದೆ. ಈ ಕಾರಣದಿಂದ ಮುಂದಿನ ದಿನಗಳಲ್ಲಿ ಫಲಾನುಭವಿಗಳಿಗೆ 5 ಕೆ.ಜಿಯ ಸಿಲಿಂಡರ್ ನೀಡಲು ಕ್ರಮ ಕೈಗೊಳ್ಳಬೇಕೆಂದು ನಿರ್ಣಯ ಕೈಗೊಳ್ಳಲಾಗುತ್ತಿದೆ. ಇಂತಹ ವ್ಯವಸ್ಥೆ ನಿರ್ಮಾಣವಾಗದಂತೆ ಅನಿಲವನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.

ಈ ಸಂದರ್ಭ ತಾಲೂಕು ಪಂಚಾಯಿತಿ ಅಧ್ಯಕೆÀ್ಷ ಬೊಳ್ಳಚಂಡ ಸ್ಮಿತಾ ಪ್ರಕಾಶ್, ಉಪಾಧ್ಯಕ್ಷ ನೆಲ್ಲೀರ ಚಲನ್ ಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಪೆÇನ್ನಂಪೇಟೆ ಗ್ರಾ.ಪಂ. ಅಧ್ಯಕ್ಷೆ ಮೂಕಳೇರ ಸುಮಿತಾ ಗಣೇಶ್, ಗೋಣಿಕೊಪ್ಪಲು ಗ್ರಾ.ಪಂ. ಅಧ್ಯಕ್ಷೆ ಸೆಲ್ವಿ ಮತ್ತಿತರರು ಹಾಜರಿದ್ದರು.

- ಎನ್.ಎನ್. ದಿನೇಶ್