ಕೂಡಿಗೆ, ಜೂ. 4: ಕೂಡಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಿಗೆ ರಾಜ್ಯ ಹೆದ್ದಾರಿಯಿಂದ ಆನೆಕೆರೆ ಮಾರ್ಗವಾಗಿ ಹಾರಂಗಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ದುರಸ್ತಿಗೆ ಬಸವನತ್ತೂರು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಈ ರಸ್ತೆಯ ಕಾಮಗಾರಿ ಮಾಡಿದ್ದು, ವರ್ಷ ಪೂರ್ತಿಯಾಗುವದರೊಳಗೆ ರಸ್ತೆ ಸಂಪೂರ್ಣ ಕಿತ್ತು ಹೋಗಿದೆ. ಕಳಪೆ ಕಾಮಗಾರಿಯಿಂದ ಕೂಡಿರುವ ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿರುವದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಸಂಚರಿಸಲು ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ರಸ್ತೆಯಲ್ಲಿ ಪ್ರವಾಸಿಗರು ಹೆಚ್ಚಾಗಿ ಸಂಚರಿಸುತ್ತಿದ್ದು, ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಿದೆ. ಸಂಬಂಧಪಟ್ಟ ಗ್ರಾ.ಪಂ.ಯವರು ರಸ್ತೆಯನ್ನು ದುರಸ್ತಿ ಪಡಿಸುವಂತೆÉ ಆಗ್ರಹಿಸಿದ್ದು ಇಲ್ಲದಿದ್ದಲ್ಲಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವದು ಎಂದು ಎಚ್ಚರಿಸಿದ್ದಾರೆ.