ನಾಪೆÇೀಕ್ಲು, ಜೂ. 3: ನಾಪೆÇೀಕ್ಲು ಸಮೀಪದ ಬೇತು ಸರಕಾರಿ ಪ್ರಾಥಮಿಕ ಶಾಲೆಯನ್ನು ಮುಚ್ಚಲಾಗುತ್ತಿದೆ ಎಂದು ಯಾರೋ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ ಕಾರಣ ಕೆಲವು ಪೆÇೀಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ದಾಖಲಿಸಿರುವದು ಕಂಡು ಬಂದಿದೆ. ಯಾರೂ ಈ ಸುಳ್ಳು ಸುದ್ದಿಗೆ ಕಿವಿಗೊಡದೆ ತಮ್ಮ ಮಕ್ಕಳನ್ನು ಬೇತು ಶಾಲೆಗೆ ದಾಖಲಿಸಬೇಕು ಎಂದು ಬೇತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಓಂ ಪ್ರಕಾಶ್ ಮತ್ತು ಸಮಿತಿ ಸದಸ್ಯರು ಮನವಿ ಮಾಡಿದ್ದಾರೆ.
ಈ ಬಗ್ಗೆ ‘ಶಕ್ತಿ’ಗೆ ಹೇಳಿಕೆ ನೀಡಿದ ಓಂ ಪ್ರಕಾಶ್ ಬೇತು ಸರಕಾರಿ ಶಾಲೆಯಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳಿವೆ. ಶಿಕ್ಷಕರೂ ಇದ್ದಾರೆ. ನಾಪೆÇೀಕ್ಲು ಪಟ್ಟಣಕ್ಕೆ ಸಮೀಪದಲ್ಲಿದ್ದು, ವಿದ್ಯಾರ್ಥಿಗಳಿಗೆ ಶಾಲೆಗೆ ಆಗಮಿಸಲು ಅನುಕೂಲವಿದೆ. ಆದ್ದರಿಂದ ಸುಳ್ಳು ಹೇಳಿಕೆಗಳಿಗೆ ಕಿವಿಗೊಡಬಾರದು ಎಂದು ಅವರು ತಿಳಿಸಿದ್ದಾರೆ.