ಮೂರ್ನಾಡು, ಜೂ. 3 : ಮೂರ್ನಾಡು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಆಗಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಆಯ್ಕೆಗೊಂಡಿ ದ್ದಾರೆ. ಈ ಹಿಂದೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಚೌರೀರ ಎಂ. ಪೆಮ್ಮಯ್ಯ ಅವರ ನಿಧನದಿಂದ ಸ್ಥಾನ ತೆರವುಗೊಂಡ ಹಿನ್ನೆಲೆಯಲ್ಲಿ ಎರಡು ವರ್ಷದ ಅವಧಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ್ಲ ಕಳೆದ ನಾಲ್ಕು ವರ್ಷದಿಂದ ನಿರ್ದೇಶಕರಾಗಿ ಹಾಗೂ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾ ಅಕಾಡೆಮಿ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.