ನಾಪೋಕ್ಲು, ಜೂ. 5: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೀರಾಜಪೇಟೆ ಮತ್ತು ಮಡಿಕೇರಿ ತಾಲೂಕಿನ ಜನಜಾಗೃತಿ ವೇದಿಕೆಯ ವತಿಯಿಂದ ನವಜೀವನ ಪೋಷಕರ ತರಬೇತಿ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು.

ವೀರಾಜಪೇಟೆಯ ಕೂರ್ಗ್ ವ್ಯಾಲಿ ಶಾಲೆಯಲ್ಲಿ ಜಿಲ್ಲಾ ನಿರ್ದೇಶಕ ಡಾ. ಎ. ಯೋಗೀಶ್ ದೀಪಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್ ಮತ್ತು ವೀರಾಜಪೇಟೆ ತಾಲೂಕು ಯೋಜನಾಧಿಕಾರಿ ಸದಾಶಿವಗೌಡ ಹಾಗೂ ಪಾನಮುಕ್ತ ನವಜೀವನ ಸದಸ್ಯರು ವಲಯದ ಮೇಲ್ವಿಚಾರಕರು ಸೇವಾಪ್ರತಿನಿಧಿಗಳು, ತರಬೇತಿ ಸಹಾಯಕರು ಉಪಸ್ಥಿತರಿದ್ದರು. ತಾಲೂಕಿನ ಕೃಷಿ ಮೇಲ್ವಿಚಾರಕ ಕೆ. ಚೇತನ್ ಕಾರ್ಯಕ್ರಮ ನಿರೂಪಿಸಿ ದರು.