ಮಡಿಕೇರಿ, ಜೂ. 5: ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ವತಿಯಿಂದ ವಿಶೇಷಚೇತನರ ಪರಿಜ್ಞಾನ ಮತ್ತು ಚಲನವಲನ ಶಿಬಿರದ ಸಮಾರೋಪ ಕಾರ್ಯಕ್ರಮ ಪೊನ್ನಂಪೇಟೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು. ಸುಮಾರು 17 ಮಂದಿ ವಿಶೇಷ ಚೇತನರಿಗೆ ವೈಟ್ ಕೇನ್ಗಳನ್ನು ಸಂಸ್ಥೆಯ ವತಿಯಿಂದ ವಿತರಿಸಲಾಯಿತು. ವೀರಾಜಪೇಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮಿ, ಪೆÇನ್ನಂಪೇಟೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ಹಿರಿಯ ವ್ಯವಸ್ಥಾಪಕ ರಮೇಶ್, ಸರಗೂರು ಅಂಕಾಚಾರಿ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗ ಹಾಜರಿದ್ದರು.