ಕುಶಾಲನಗರ, ಜೂ. 5: ಕೊಡಗು ಜಿಲ್ಲೆಯಲ್ಲಿ ಈ ಬಾರಿ 1 ಲಕ್ಷ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪರಿಸರ ಸಮತೋಲನ ಕಾಪಾಡುವಲ್ಲಿ ಮಕ್ಕಳು ಗಂಭೀರವಾಗಿ ಚಿಂತನೆ ಹರಿಸಬೇಕು. ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ಹೊಂದಬೇಕು ಎಂದು ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್.ಗಣೇಶನ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಮಡಿಕೇರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಕೊಡಗು ಜಿಲ್ಲಾ ಸಮಿತಿ, ಅರಣ್ಯ ಇಲಾಖೆ, ಸಾರ್ವಜನಿಕ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಕುಶಾಲನಗರ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಕುಶಾಲನಗರ ವಲಯ ಅರಣ್ಯಾಧಿಕಾರಿ ಸಿ.ಆರ್.ಅರುಣ್ ಕುಮಾರ್, ಹಸಿರೀಕರಣ ಯೋಜನೆಯಡಿ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಿದರು. ಗಿಡಗಳನ್ನು ನೆಟ್ಟು ಬೆಳೆಸುವ ಉದ್ದೇಶ, ಉಪಯೋಗಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಸರಕಾರಿ ಇಂಜಿನಿಯ ರಿಂಗ್ ಕಾಲೇಜು ಉಪನ್ಯಾಸಕ ಶ್ರೀನಾಥ್ ಪರಿಸರದ ಬಗ್ಗೆ ವಿದ್ಯಾರ್ಥಿ ಗಳಿಗೆ ಹಿತವಚನಗಳನ್ನಾಡಿದರು.

ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಂಚಾಲಕ ಎಂ.ಎನ್.ಚಂದ್ರಮೋಹನ್, ಜೀವಜಲದ ಮಹತ್ವ, ಜಲಮೂಲ, ನದಿಗಳ ಸ್ವಚ್ಛತೆ, ಸಂರಕ್ಷಣೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಿದರು. ಕರಾವಿಪ ಕೊಡಗು ಜಿಲ್ಲಾ ಘಟಕ ಅಧ್ಯಕ್ಷರಾದ ಫಿಲಿಪ್‍ವಾಸ್ ವಿದ್ಯಾರ್ಥಿಗಳಿಗೆ ಸ್ವಚ್ಛ ಪರಿಸರದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕರಾವಿಪ ಸಂಚಾಲಕ ಟಿ.ಜಿ.ಪ್ರೇಮ್‍ಕುಮಾರ್ ಪ್ರಾಸ್ತಾವಿಕ ನುಡಿಗಳಾಡಿ ದಿನದ ಮಹತ್ವದ ಕುರಿತು ವಿವರಿಸಿದರು. ಅರಣ್ಯಾಧಿಕಾರಿಗಳಾದ ಲಕ್ಷ್ಮಿಕಾಂತ್, ಕೊಟ್ರೇಶ್, ನದಿ ಜಾಗೃತಿ ಸಮಿತಿ ಅಧ್ಯಕ್ಷ ಡಿ.ಆರ್. ಸೋಮಶೇಖರ್, ಡಿಆರ್‍ಎಫ್‍ಒ ಕನ್ನಂಡ ರಂಜನ್, ಸಿ.ಟಿ. ಸೋಮಶೇಖರ್, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಬಿ.ಎನ್.ಸುನಿಲ್, ಶಾಲೆಯ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.