ಮೂರ್ನಾಡು, ಜೂ. 5: ಇಲ್ಲಿನ ಮಾರುತಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಸ್ಕಿಜೋಫ್ರೀನಿಯಾ ದಿನಾಚರಣೆ ಆಚರಿಸಲಾಯಿತು.

ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಮತ್ತು ಮಾರುತಿ ವಿದ್ಯಾಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪಟ್ಟಣದ ಮುಖ್ಯ ಬೀದಿಯಲ್ಲಿ ಮೆರವಣಿಗೆ ಸಾಗಿ ಮಾನಸಿಕ ಆರೋಗ್ಯದ ಕುರಿತು ಅರಿವು ಮೂಡಿಸಿದರು. ಮನೋ ವೈದ್ಯರಾದ ಡಾ. ಡೇವಿನ್ ರೋಗದ ಗುಣಲಕ್ಷಣಗಳ ಬಗ್ಗೆ ಮಾಹಿತಿ ನೀಡಿದರು. ದಿನದ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಪ್ರಾಂಶುಪಾಲೆ ಸಪ್ನಾ ಸುಬ್ಬಯ್ಯ, ಶಿವಕುಮಾರ್, ಭವಾನಿ, ಪಾವನ, ಶಿಕ್ಷಕ ವೃಂದದವರು ಹಾಜರಿದ್ದರು.