ಕೃಷಿ ಅಭಿಯಾನ

ಕೃಷಿ ಇಲಾಖೆ ವತಿಯಿಂದ ನಾಪೋಕ್ಲು ಹೋಬಳಿಯ ಚೆಯ್ಯಂಡಾಣೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ‘ಕೃಷಿ ಅಭಿಯಾನ’ ನಡೆಯಲಿದೆ. ಕೃಷಿ ಸಂಬಂಧಿತ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ, ರೈತರು-ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಜಿ.ಪಂ.ಸಾಮಾನ್ಯ ಸಭೆ

ಜಿಲ್ಲಾ ಪಂಚಾಯತ್ ವಿಶೇಷ ಸಾಮಾನ್ಯ ಸಭೆಯು ಜಿ.ಪಂ.ಅಧ್ಯಕ್ಷÀ ಬಿ.ಎ.ಹರೀಶ್ ಅವರ ಅಧ್ಯಕ್ಷತೆಯಲ್ಲಿ ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ.

ಕಾರ್ಯಾಗಾರ

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮಕ್ಕಳ ವಿಭಾಗದಿಂದ ಮುಂದುವರಿದ ವೈದ್ಯಕೀಯ ಶಿಕ್ಷಣದಡಿಯಲ್ಲಿ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯ ಬಗ್ಗೆ ತಿಳುವಳಿಕೆ ಹಾಗೂ ಕಾರ್ಯಗಾರವು ಬೆಳಗ್ಗೆ 9 ಗಂಟೆಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.

ಅಂಚೆ ಅದಾಲತ್ ಸಭೆ

ಅಂಚೆ ಅದಾಲತ್‍ನ ಸಭೆಯು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ, ವಿಭಾಗೀಯ ಕಚೇರಿಯಲ್ಲಿ ನಡೆಯಲಿದೆ.