ಕುಶಾಲನಗರ, ಜೂ. 6: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ಕಾವೇರಿ ನದಿ ಸ್ವಚ್ಛತಾ ಆಂದೋಲನ ಆಶ್ರಯದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕೇಂದ್ರ ಕಚೇರಿ ಆವರಣದಲ್ಲಿ ಗಿಡ ನೆಡಲಾಯಿತು. ಡಿವೈಎಸ್ಪಿ ದಿನಕರ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್. ಚಿಣ್ಣಪ್ಪ ಮಾತನಾಡಿ, ಪರಿಸರವನ್ನು ನಿರ್ಲಕ್ಷಿಸಿದಲ್ಲಿ ಮುಂದಿನ ದಿನಗಳು ಆತಂಕದ ದಿನಗಳಾಗುವ ಸಾಧ್ಯತೆ ಇರುವದಾಗಿ ತಿಳಿಸಿದರು. ಈ ಸಂದರ್ಭ ಪೊಲೀಸ್ ವೃತ್ತ ನಿರೀಕ್ಷಕರಾದ ದಿನೇಶ್ ಕುಮಾರ್, ಸೋಮವಾರಪೇಟೆ ಪ.ಪಂ. ಸದಸ್ಯ ವೆಂಕಟೇಶ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್. ಚಂದ್ರಮೋಹನ್, ಸಮಿತಿಯ ಪ್ರಮುಖರಾದ ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದನ್, ಕೆ.ಎನ್. ದೇವರಾಜ್, ಕರಾವಿಪ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮ್‍ಕುಮಾರ್ ಇದ್ದರು.