ಸುಂಟಿಕೊಪ್ಪ, ಜೂ. 6: ಅರಣ್ಯ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ ಆಶ್ರಯದಲ್ಲಿ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ ಹಾಗೂ ಇಕೋ ಕ್ಲಬ್‍ಗಳ ವತಿಯಿಂದ ಪರಿಸರ ಜಾಗೃತಿ ಆಂದೋಲನದ ಅಂಗವಾಗಿ ಗಿಡನೆಟ್ಟು ಪರಿಸರ ದಿನ ಆಚರಿಸಲಾಯಿತು.
ಪ್ರೌಢಶಾಲೆಯ ಇಕೋ ಕ್ಲಬ್‍ನ ಸಂಚಾಲಕ ಟಿ.ಜಿ. ಪ್ರೇಮ್‍ಕುಮಾರ್ ಸಸಿನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ ಮಾತನಾಡಿ, ಪರಿಸರ ಸಂರಕ್ಷಿಸಬೇಕಾಗಿದೆ ಎಂದರು.
ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಫಿಲಿಪ್‍ವಾಸ್ ಮಾತನಾಡಿ, ವಿದ್ಯಾರ್ಥಿಗಳು ಜನರಲ್ಲಿ ಪರಿಸರ ಜಾಗೃತಿ ಬೆಳೆಸಬೇಕೆಂದರು.
ಸಿ.ಟಿ. ಸೋಮಶೇಖರ್ ವಿದ್ಯಾರ್ಥಿಗಳಿಗೆ ಪರಿಸರ ಪ್ರತಿಜ್ಞಾ ವಿಧಿ ಭೋದಿಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿ.ಎ. ಗೀತಾ, ಉಪನ್ಯಾಸಕ ಎಸ್.ಹೆಚ್. ಈಶ, ಶಿಕ್ಷಕವೃಂದ, ಇತರರು ಇದ್ದರು.