ಕರಿಕೆ, ಜೂ. 6: ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ಚೆತ್ತುಕಾಯ ಆಲತ್ತಿಕಡವು ಎಂಬಲ್ಲಿ ಮನೆ ಮೇಲೆ ಬೃಹತ್ ಮರವೋಂದು ಉರುಳಿ ಬಿದ್ದ ಪರಿಣಾಮ ಮನೆಯ ಮೇಲ್ಚಾವಣಿಯ ಶೀಟುಗಳು ಜಖಂಗೊಂಡಿವೆ.

ಕೂಲಿ ಕಾರ್ಮಿಕರಾಗಿರುವ ಸುಕುಮಾರ ಎಂಬವರ ಮನೆಮೇಲೆ ಆಕಸ್ಮಿಕವಾಗಿ ಮರ ಉರುಳಿ ಬಿದ್ದಿದ್ದು, ಮನೆಯಲ್ಲಿದ್ದ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಚಂದ್ರ ನಾಯರ್ , ಅಭಿವೃದ್ಧಿ ಅಧಿಕಾರಿ ಬಿಪಿನ್ ಕೆ.ಜಿ. ಪಂಚಾಯಿತಿ ಸದಸ್ಯೆ ಜಯಂತಿ, ಕಂದಾಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ಶಕ್ತಿ'ಯೊಂದಿಗೆ ಮಾತನಾಡಿದ ಕರಿಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಿಪಿನ್ ಇದೀಗ ಮಳೆಗಾಲ ಪ್ರಾರಂಭವಾದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಪ್ಲಾಸ್ಟಿಕ್ ಟಾರ್ಪಲ್ ವಿತರಿಸಲಾಗುವದು. ನಂತರ ಪಂಚಾಯಿತಿ ಕ್ರಿಯಾಯೋಜನೆ ಮುಖಾಂತರ ಮನೆ ದುರಸ್ತಿಗೆ ಕ್ರಮ ವಹಿಸಲಾಗುವದು ಎಂದು ಮಾಹಿತಿ ನೀಡಿದರು.