ಸುಂಟಿಕೊಪ್ಪ, ಜೂ. 6: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕೊಡಗು ಮತ್ತು ಮಾದಾಪುರ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಮಾತನಾಡಿ, ಮಾದಕ ವಸ್ತುಗಳಿಂದ ದೂರವಿದ್ದು ತಮ್ಮ ಆರೋಗ್ಯವನ್ನು ತಾವೇ ಕಾಪಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಸೋಮವಾರಪೇಟೆ ಯೋಜನಾಧಿಕಾರಿ ಪ್ರಕಾಶ್, ಕಾಲೇಜಿನ ಪ್ರಾಂಶುಪಾಲ ಮಂದಪ್ಪ ಮಾತನಾಡಿದರು.
ವೇದಿಕೆಯಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ರೇವತಿ, ಸುಂಟಿಕೊಪ್ಪ ವಲಯದ ಮೇಲ್ವಿಚಾರಕಿ ಕಾಂತಿಕಾ ಮಣಿ, ಸೇವಾ ಪ್ರತಿನಿಧಿ ಕುಸುಮಾ ಇದ್ದರು. ಶಿಕ್ಷಕಿ ಪಿ.ಪಿ. ಪವಿತ ಸ್ವಾಗತಿಸಿ, ಕೆ.ಎಸ್. ಆಶ್ವಿನಿ ವಂದಿಸಿದರು.