ವೀರಾಜಪೇಟೆ, ಜೂ. 6 : ವೀರಾಜಪೇಟೆ ಪಟ್ಟಣ ಪಂಚಾಯಿತಿ ನೀರು ಪೂರೈಕೆ ಕೇಂದ್ರದ ಬೇತರಿ ಮೂಲ ಸ್ಥಾವರಕ್ಕೆ ನಿರಂತರವಾಗಿ ವಿದ್ಯುತ್ ಸಂಪರ್ಕ ಕಡಿತ ಗೊಳ್ಳುತ್ತಿರುವದರಿಂದ ವೀರಾಜಪೇಟೆ ಪಟ್ಟಣದ ಜನತೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ. ಬೇತರಿ ಗ್ರಾಮದ ಕಾವೇರಿ ಹೊಳೆಯ ದಡದಲ್ಲಿರುವ ಮೂಲ ಸ್ಥಾವರದಲ್ಲಿ ವಿದ್ಯುತ್ ಅಡಚಣೆಯಿಂದಾಗಿ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಅಭಿಯಂತರ ಹೇಮ್‍ಕುಮಾರ್ ತಿಳಿಸಿದ್ದಾರೆ.